BY Vijayendra | ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ವಿಜಯೇಂದ್ರಗೆ ಭರ್ಜರಿ ಸ್ವಾಗತ, ಎಲ್ಲೆಲ್ಲಿ ಭೇಟಿ, ಏನೇನು ವಿಶೇಷ?

BY Vijayendra

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲು ಶಿವಮೊಗ್ಗಕ್ಕೆ ಆಗಮಿಸಿದ ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಯಿತು. ಸೇಬಿನ ಹಣ್ಣಿನ ಹಾರ ಹಾಕಲಾಯಿತು. ಬೈಕ್ ರ್ಯಾಲಿ ಮೂಲಕ ಮೆರವಣಿಗೆ ಮಾಡಲಾಯಿತು. ಹಲವೆಡೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

KSE BYVವಿಜಯೇಂದ್ರ ಅವರು ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದೇ ಪಟಾಕಿ ಸಿಡಿಸಿ ಘೋಷಣೆಗಳನ್ನು ಕೂಗಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ನೇತೃತ್ವದಲ್ಲಿ ವಾದ್ಯಮೇಳದೊಂದಿಗೆ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ವಿಶೇಷವೆಂದರೆ, ಪಕ್ಷದ ಕಚೇರಿಯು ಚಪ್ಪರ, ತಳಿರು-ತೋರಣದಿಂದ ಅಲಂಕೃತಗೊಂಡಿತ್ತು.

READ | ತುಂಗಾ ನದಿ ನೀರಿನಲ್ಲಿ‌ ಅಲ್ಯೂಮಿನಿಯಂ ಅಂಶ ಪತ್ತೆ, ನಡೆಯಲಿದೆ ತಜ್ಞರಿಂದ ಸಂಶೋಧನೆ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸೋಣ
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮಿಸೋಣ. ಎಲ್ಲ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು ಎಂದರು.
ಈಶ್ವರಪ್ಪ, ಸಂಘದ ಪ್ರಮುಖರ ಮನೆಗೆ ಭೇಟಿ

BY Vijayendra 2 1 ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ತವರು ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಂತೆ ಮತ್ತೂರು ಗ್ರಾಮಕ್ಕೆ ತೆರಳಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹಕರಾದ ಪಟ್ಟಾಭಿರಾಮ್ ಹಾಗೂ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ ಭಾನುಪ್ರಕಾಶ್ ನಿವಾಸಕ್ಕೆ ಹಾಗೂ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದರು.
ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದುಕೊಂಡರು. ಮನೆಗೆ ಬಂದ ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಈಶ್ವರಪ್ಪ ವಿಜಯೇಂದ್ರಗೆ ಸಿಹಿ ತಿನಿಸಿದರು.
ವಿಜಯೇಂದ್ರ ಭೇಟಿ ಏನೆಲ್ಲ ವಿಶೇಷ?
ಮಹಿಳೆಯರು ಪೂರ್ಣ ಕುಂಭದಿಂದ ಸ್ವಾಗತಿಸಿದರು. ಪಟಾಕಿ ಸಿಡಿಸಿ ಸಂಭ್ರಮ, ಸೇಬಿನ ಹಣ್ಣಿನ ಬೃಹತ್ ಹಾರವನ್ನು ಹಾಕಲಾಯಿತು.
ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಬೆಕ್ಕಿನಕಲ್ಮಠದಿಂದ ಮೆರವಣಿಗೆ ನಡೆಯಿತು. ಭಾರಿ ಸಂಖ್ಯೆಯಲ್ಲಿ ಬೈಕ್‍ಗಳು ಜಾಥಾದಲ್ಲಿ ಭಾಗವಹಿಸಿದ್ದವು. ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಪಿಇಎಸ್ ಕಾಲೇಜು ಸಭಾಂಗಣಕ್ಕೆ ತಲುಪಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್ ಉಪಸ್ಥಿತರಿದ್ದರು.

BY Vijayendra 1 1

error: Content is protected !!