Crime news | ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ, ರಾಜಾರೋಷವಾಗಿ ಗಾಂಜಾ ಮಾರಾಟ

Crime news

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಫುಟ್ ಪಾತ್‍ ಪಕ್ಕದಲ್ಲಿ ಬಿದ್ದಿದ್ದ ಸುಮಾರರು 40-45 ವರ್ಷದ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರು ಅಂಬುಲೆನ್ಸ್ ಮೂಲಕ ಮೆಗ್ಗಾನ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಸುಮಾರು 5.10 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈತ ಬಿಳಿನೀಲಿ ಮಿಶ್ರಿತ ಬಣ್ಣದ ಅರ್ಧ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ಮೃತ ವ್ಯಕ್ತಿಯ ಸಂಬಂಧಿಕರ/ ವಾರಸುದಾರರ ಪತ್ತೆಯಾದಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9611761255 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

READ | ನೂರಡಿ‌ ರಸ್ತೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದರೋಡೆ ಮಾಡಿದ ಇಬ್ಬರು ಬಂಧನ, ಇವರ ಮೇಲಿವೆ ರಾಶಿ‌ ರಾಶಿ‌ ಕೇಸ್!

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Dead body

SHIMOGA: ಶಿವಮೊಗ್ಗ ತಾಲೂಕು ಬೆಳಲಕಟ್ಟೆ ಗ್ರಾಮದ ಕೆರೆಕೋಡಿ ಹರಿಯುವ ಸೇತುವೆ ಹತ್ತಿರ ಮೇಲಿನ ತುಂಗಾ ಚಾನಲ್‍ನೊಳಗೆ ಸುಮಾರು 25-30 ವರ್ಷದ ಅನಾಮಧೇಯ ಗಂಡಸಿನ ಮೃತ ದೇಹ ತೇಲುತ್ತಿದ್ದು, ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ಈ ವ್ಯಕ್ತಿಯ ಎತ್ತರ ಸುಮಾರು 5.7 ಅಡಿ, ದಪ್ಪನೆಯ ಮೈಕಟ್ಟು ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಬಿಟ್ಟಿರುತ್ತಾರೆ. ಈತನ ಹೆಸರು, ವಿಳಾಸ ಪತ್ತೆಯಾಗಿಲ್ಲ. ಈತನ ಮೈಮೇಲೆ ಕಡು ನೀಲ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ಬಣ್ಣದ ಬಿಳಿ ಸಣ್ಣ ಗೀರಿನ ತುಂಬುತೋಳಿನ ಶರ್ಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ಸಂಬಂಧಿಕರ/ ವಾರಸುದಾರರ ಪತ್ತೆಯಾದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಅಥವಾ ಕಂ.ರೂ.ನಂ.: 100, ದೂ.ಸಂ.: 08182-261418/261410/261422/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Crime logo

ಇಸ್ಪೀಟ್ ಆಡುತ್ತಿದ್ದ 9 ಜನ‌ ಅರೆಸ್ಟ್

HOSANAGAR: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬೈಲ್ ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ 9 ಜನರನ್ನು ಬಂಧಿಸಲಾಗಿದೆ. ಜೂಜಾಟದಲ್ಲಿ ಪಣವಾಗಿಟ್ಟಿದ್ದ ₹80,500 ನಗದು ಮತ್ತು ಇಸ್ಪೀಟು ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಮಾರಾಟ ಆರೋಪಿ ಅಂದರ್

Ganja

SHIMOGA: ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮತ್ ಲೇ ಔಟ್ ನಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಬಂಧಿಸಲಾಗಿದೆ.
ಮೇಲಿನ ತುಂಗಾನಗರ ನಿವಾಸಿ ಶಾರೂಕ್ ಅಲಿಯಾಸ್ ಶಾರೂ(23) ಬಂಧಿತ ಆರೋಪಿ. ಈತನ ಬಳಿಯಿಂದ ಅಂದಾಜು ₹5,000 ಮೌಲ್ಯದ ಒಟ್ಟು 158 ಗ್ರಾಂ ತೂಕದ ಒಣ ಗಾಂಜಾ ಮತ್ತು 350 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ
ಗಾಂಜಾ ಮಾರಾಟದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಲರಾಜ್, ತುಂಗಾನಗರ ಠಾಣೆ ಮಂಜುನಾಥ್ ಮಾರ್ಗದರ್ಶನದಲ್ಲಿ ಪಿಎಸ್ಐ ಶಿವಪ್ರಸಾದ್ ನೇತೃತ್ವದ ಸಿಬ್ಬಂದಿಯನ್ನೊಳಗೊಂಡ ತಂಡ ದಾಳಿ‌‌ ನಡೆಸಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!