Competition | ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ, ವಿಜೇತರಿಗೆ ಆಕರ್ಷಕ ಬಹುಮಾನ

Shivamogga city logo

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾನಸ ಇಂಟರ್ ನ್ಯಾಷನಲ್ ಐಸಿಎಸ್.ಸಿ (ICSE) ಶಾಲೆಯ ಆವರಣದಲ್ಲಿ ನ.5ರಂದು ಬೆಳಗ್ಗೆ 11 ಗಂಟೆಗೆ ಐದನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

READ | ಫಟಾ-ಫಟ್ ನ್ಯೂಸ್, ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನ ಕರೆಂಟ್ ಇರಲ್ಲ, ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ, ಮೆಸ್ಕಾಂ ಜನಸಂಪರ್ಕ ಸಭೆ

ಶಾಲೆಯ ಆವರಣದಲ್ಲಿ ಎಲ್.ಕೆ.ಜಿಯಿಂದ‌ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರವನ್ನು ಕೊಟ್ಟು ಪ್ರೋತ್ಸಾಹಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರವೇಶ ಶುಲ್ಕ ₹100 ನಿಗದಿಪಡಿಸಲಾಗಿದೆ. ವಿಜೇತರಾದವರಿಗೆ ಬಹುಮಾನಗಳನ್ನು ನ.18ರಂದು ಶಾಲೆಯ ಆವರಣದಲ್ಲಿ ಪ್ರದಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9353143033, 9481265405, 9448976887 ಸಂಪರ್ಕಿಸಬಹುದು.

error: Content is protected !!