Drought compensation  | ಐಡಿ ಲಿಂಕ್ ಆಗದಿದ್ದರೆ ಬರ ಪರಿಹಾರ ಸಿಗಲ್ಲ, ಇಲ್ಲಿದೆ ಮಹತ್ವದ ಸೂಚನೆ

Bara farmer

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬರ ಪರಿಹಾರ ಪಡೆಯಬೇಕಾದರೆ ಕಡ್ಡಾಯವಾಗಿ ಫ್ರೂಟ್ಸ್ ಐಡಿಗೆ ನೋಂದಣಿ  (fruits id registration) ಮಾಡಿಸಿಕೊಂಡಿರಬೇಕು ಎಂದು ತಿಳಿಸಿದ್ದಾರೆ.

READ | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ

2023-24ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕು ತೀವ್ರ ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಮುಂಗಾರು ವೈಫಲ್ಯ ಆಗಿರುವುದರಿಂದ ತಾಲೂಕಿನಲ್ಲಿ ವಿವಿಧ ಕೃಷಿ ಹಾಗೂ ಇತರೆ ಬೆಳೆಗಳು ಹಾನಿಯಾಗಿರುವ ಕಾರಣ, ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಪರಿಹಾರ ಪಡೆಯಲು ತಾಲೂಕಿನ ರೈತರು ತಮ್ಮ ಎಲ್ಲ ಪಹಣಿಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ನೋಂದಾಯಿಸಿ ಎಫ್‍ಐಡಿ (ಫಾರ್ಮರ್ ಐಡಿ) ಪಡೆಯಬೇಕಾಗಿರುತ್ತದೆ. ಇದಲ್ಲದೆ ಎಫ್.ಐ.ಡಿಯು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, ಪಿಎಂಕಿಸಾನ್ ಯೋಜನೆಗಳಿಗೂ ಹಾಗೂ ಕೃಷಿ, ತೋಟಗಾರಿಕೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳಲ್ಲಿ ರೈತರು ಸೌಲಭ್ಯಗಳನ್ನು ಪಡೆಯಲು ಅತ್ಯವಶ್ಯಕವಾಗಿರುತ್ತದೆ.
ಶೇ.57.51ರಷ್ಟು ಜನ ಮಾತ್ರ ನೋಂದಣಿ
ಶಿವಮೊಗ್ಗ ತಾಲ್ಲೂಕಿನಲ್ಲಿ ಒಟ್ಟು 27,313 ಭೂ ಹಿಡುವಳಿದಾರರ ಬಳಿ ಒಟ್ಟು 76,044 ತಾಕುಗಳಿದ್ದು ಇದರಲ್ಲಿ ಕೇವಲ 43,738 ಸರ್ವೆ ನಂಬರ್’ಗಳನ್ನು ಮಾತ್ರ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲೆಗಳನ್ನು ನೋಂದಾಯಿಸಿರುತ್ತಾರೆ. ಇಲ್ಲಿಯವರೆಗೆ ಶೇ.57.51 ರಷ್ಟು ರೈತರು ಮಾತ್ರ ಪಹಣಿಗಳನ್ನು ತಂತ್ರಾಂಶದಲ್ಲಿ ಲಿಂಕ್ ಮಾಡಿಸಿರುತ್ತಾರೆ. ಇನ್ನುಳಿದ 33,206 ತಾಕುಗಳನ್ನು ರೈತರು ತಕ್ಷಣವೇ ಈ ತಂತ್ರಾಂಶದಲ್ಲಿ ಸೇರ್ಪಡೆ ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ನಾಗರಾಜ್ ಹಾಗೂ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಎಸ್.ಟಿ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಾಗಿ ಪಹಣಿಗಳನ್ನು ಸೇರ್ಪಡೆ ಮಾಡಿಸಿಕೊಳ್ಳಲು ರೈತರು ತಮ್ಮ ಎಲ್ಲ ಪಹಣಿಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತೋಟಗಾರಿಕೆ ಹಾಗೂ ಗ್ರಾಮ ಆಡಳಿತಾಧಿಕಾರಿ ಕಚೇರಿಗಳನ್ನು ಸಂಪರ್ಕಿಸುವುದು.

error: Content is protected !!