ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ವಿವಿಧೆಡೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ಕರೆಯಲಾಗಿದೆ. ನ.20ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
READ | ಮೆಗ್ಗಾನ್ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶರಣಪ್ರಕಾಶ್ ಪಾಟೀಲ್ ಸೂಚನೆ, ಸಭೆಯ ಟಾಪ್ 3 ವಿಚಾರಗಳೇನು?
ಯಾವ್ಯಾವ ಹುದ್ದೆಗಳು ಖಾಲಿ?
ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನ ಕರೆಯಲಾಗಿದೆ.
ಅರ್ಹ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.