Journalism | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ, ಕೂಡಲೇ ಅರ್ಜಿ ಸಲ್ಲಿಸಿ

JOB FIND

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

READ | ದೀಪಾವಳಿ ದಿನವೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, ಹತ್ಯೆಯಾದ 24 ಗಂಟೆಯೊಳಗೆ ಆರೋಪಿಗಳು ಅರೆಸ್ಟ್, ಕೊಲೆಯ ರಹಸ್ಯ ಬಿಚ್ಚಿಟ್ಟ ಆರೋಪಿಗಳು

ಹೊಂದಿರಬೇಕಾದ ಅರ್ಹತೆಗಳು

  • ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು.
  • ಕನ್ನಡ, ಇಂಗ್ಲಿಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು.
  • ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.

ಮಾಸಿಕ ₹15 ಸಾವಿರ ಶಿಷ್ಯವೇತನ
ಜನವರಿ 2024 ರಿಂದ ಡಿಸೆಂಬರ್ 2024ರ ವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹15,000 ಶಿಷ್ಯವೇತನ ನೀಡಲಾಗುವುದು.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ನ.27 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆಂಚೆ: varthabhavansmg1@gmail.com ನ್ನು ಸಂಪರ್ಕಿಸಿ.

error: Content is protected !!