KAS, IAS Training | ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ 50 ದಿನಗಳ ತರಬೇತಿ, ಕೂಡಲೇ ಹೆಸರು ನೋಂದಾಯಿಸಿ

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ನ.24ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ.ಕೆ.ಎಲ್.ಎನ್. ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಎರಡು ದಿನ ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ, ಹಿಜಾಬ್ ಧರಿಸುವುದಕ್ಕೆ ನಿರ್ಬಂಧ, ಏನೆಲ್ಲ ಷರತ್ತುಗಳು ಅನ್ವಯ?

error: Content is protected !!