Shimoga Medical college | ಮೆಗ್ಗಾನ್ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶರಣಪ್ರಕಾಶ್ ಪಾಟೀಲ್ ಸೂಚನೆ, ಸಭೆಯ ಟಾಪ್ 3 ವಿಚಾರಗಳೇನು?

Sharana prakash patil SIMS

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಭೂತ ಸೌಕರ್ಯ, ಹುದ್ದೆ ಭರ್ತಿ, ಅಭಿವೃದ್ದಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಸಂಸ್ಥೆಯ ಅಭಿವೃದ್ದಿಗೆ ಪೂರಕವಾಗಿ ಅಧಿಕಾರಿ/ಸಿಬ್ಬಂದಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಕೂಡಲೇ ಹುದ್ದೆಗಳನ್ನು ಭರ್ತಿ ಮಾಡಿ
ರೇಡಿಯೋಲಜಿಸ್ಟ್ ಹುದ್ದೆಗೆ ಅರ್ಜಿ ಕರೆದು ನೇಮಕ ಮಾಡಬೇಕು. ಪಿಜಿ ನಸಿರ್ಂಗ್ ವಿದ್ಯಾರ್ಥಿನಿಲಯಕ್ಕೆ ಪ್ರಸ್ತಾವನೆ ಕಳುಹಿಸಿ, ಆಸ್ಪತ್ರೆಯಲ್ಲಿ ಆಂಕೋಸರ್ಜನ್, ನ್ಯೂರೋಸರ್ಜನ್, ನ್ಯೂರಾಲಜಿಸ್ಟ್ ಗಳಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೇಮಕ ಮಾಡಿಕೊಂಡು ಸೇವೆ ಒದಗಿಸಲು ತಿಳಿಸಿದರು.
ಖಾಲಿ ಹುದ್ದೆ ಭರ್ತಿಗೆ ಡಿಪಿಸಿ ಸಿದ್ದಪಡಿಸಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು ಎಂದ ಅವರು ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳನ್ನು ಡಿಸಿ ಹಾಗೂ ಸಿಇಓ ಅರ್ಜಿ ಆಹ್ವಾನಿಸಿ ತುಂಬಲು ಸೂಚಿಸಿದರು.

READ | ಶಿವಮೊಗ್ಗದಲ್ಲಿ ಬೋಧಕರ ನೇಮಕಾತಿಗೆ ನಡೆಯಲಿದೆ ಸಂದರ್ಶನ, ಎಲ್ಲಿ, ಯಾವಾಗ?

ಶರಣ್ ಪ್ರಕಾಶ್ ಪಾಟೀಲ್ ನೀಡಿದ ಸೂಚನೆಗಳು

SHARANAPRAKASH PATIL MINISTER

  1. ಮಲೆನಾಡಿನ ಹಲವು ಪಿಎಚ್.ಸಿಗಳಲ್ಲಿ ವೈದ್ಯರಿಲ್ಲ. ತುಮರಿ, ಬ್ಯಾಕೋಡು ಸೇರಿದಂತೆ ಸಾಗರದ ಮೂರು ಪಿಎಚ್.ಸಿ ಯಲ್ಲಿ ವೈದ್ಯರಿಲ್ಲದೆ ತುಂಬ ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದ್ದು, ಇಲ್ಲಿಗೆ ವೈದ್ಯರನ್ನು ನೇಮಿಸಲು ಕ್ರಮ ವಹಿಸಬೇಕು. ಹಾಗೂ ಮೆಗ್ಗಾನ್ ಆಸ್ಪತ್ರೆಯ ಖಾಲಿ ಹುದ್ದೆ ಭರ್ತಿ ಸಂಬಂಧ ಕಡತ ಸಿದ್ದಪಡಿಸಿ ಸರ್ಕಾಕ್ಕೆ ಸಲ್ಲಿಸುವಂತೆ ತಿಳಿಸಿದರು.
  2. ಸಂಸ್ಥೆಯಲ್ಲಿ ಡಿ ಗ್ರೂಪ್ ಮತ್ತು ಸ್ಕ್ಯಾವೆಂಜರ್ ನಡುವಿನ ವೇತನ ವ್ಯತ್ಯಾಸಕ್ಕೆ ಸಂಬಂಧಿಸಿಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ಡಿಸಿಗೆ ಸೂಚನೆ ನೀಡಿದ ಅವರು, ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡಬೇಕು. ಅವರಿಗೆ ನಿಗದಿಯಾದ ವೇತನ ಭತ್ಯೆಗಳನ್ನು ಸರಿಯಾಗಿ ಪಾವತಿಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
  3. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜೂರಾದ ತಜ್ಞ ವೈದ್ಯರು ಸೇರಿದಂತೆ ಇತರೆ ಹುದ್ದೆಗಳನ್ನು ತುಂಬಲು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಆಸ್ಪತ್ರೆಗೆ ಅಗತ್ಯವಾದ ಉಪಕರಣ ಇತರೆ ಬೇಡಿಕೆಗಳ ಪ್ರಸ್ತಾವನೆ ಸಲ್ಲಿಸಿ.

ಸಿಮ್ಸ್ ಮಾಹಿತಿ ನೀಡಿದ ಆಡಳಿತಾಧಿಕಾರಿ
ಸಿಮ್ಸ್ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಮಾತನಾಡಿ, ಮುಖ್ಯ ಆಸ್ಪತ್ರೆಯಲ್ಲಿ 791, ಓಬಿಜಿ 304, ಪಿಡೀಯಾಟ್ರಿಕ್ 120 ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 299 ಹಾಸಿಗೆ ಸೇರಿದಂತೆ ಒಟ್ಟು 1514 ಹಾಸಿಗೆ ಸಾಮಥ್ರ್ಯವನ್ನು ಆಸ್ಪತ್ರೆ ಹೊಂದಿದೆ. ಇದರಲ್ಲಿ 1302 ಆಕ್ಸಿಜನ್ ಬೆಡ್, 128 ಐಸಿಯು ಮತ್ತು 110 ಹೆಡಿಯು ಇದೆ.
ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಒಟ್ಟು 333 ಶುಶ್ರೂಷಕರು ಕಾರ್ಯನಿರ್ವಹಿಸುತ್ತಿದ್ದು ಇನ್ನೂ 100 ಶುಶ್ರೂಷಕರ ಅವಶ್ಯಕತೆ ಇದೆ. ಗ್ರೂಪ್ ಎಬಿಸಿಡಿ ಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ಮತ್ತು ಡಿ ನೌಕರರ ವಸತಿ ನಿಲಯಗಳ ಕೊರತೆ ಇದೆ. ಹಾಗೂ ಹೆಚ್ಚುವರಿ ಇಟಿಪಿ ಅವಶ್ಯಕತೆ ಇದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಾತನಾಡಿದರು. ಸಭೆಯಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಡಿಎಂಇ ಸುಜಾತಾ ರಾಥೋಡ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ವಿವಿಧ ವಿಭಾಗಗಳ ಮುಖ್ಯಸ್ಥರು, ಹಾಜರಿದ್ದರು.

error: Content is protected !!