ಸುದ್ದಿ ಕಣಜ.ಕಾಂ ಬೆಂಗಳೂರು
BENGALLURU: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆರಳಚ್ಚು ಮತ್ತು ಶೀಘ್ರ ಲಿಪಿಕಾರ ಹುದ್ದೆಗಳು ಖಾಲಿ ಇದ್ದು, ಇವುಗಳು ಬ್ಯಾಕ್ ಲಾಗ್ ಹುದ್ದೆಗಳಾಗಿರುತ್ತವೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority-BDA )
ಖಾಲಿ ಇರುವ ಹುದ್ದೆಗಳು- ಬೆರಳಚ್ಚುಗಾರ 1, ಶೀಘ್ರ ಲಿಪಿಕಾರ 1
ಅರ್ಜಿ ಸಲ್ಲಿಕೆ ಆರಂಭ– 09/11/2023
ಕೊನೆಯ ದಿನಾಂಕ– 08/12/2023 (ಸಂಜೆ 5.30)
ನೇಮಕಾತಿ ವಿಧಾನ– ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡಾವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ನೇಮಕ
READ | ಶಿವಮೊಗ್ಗದಲ್ಲಿ ಉದ್ಯೋಗ ಅವಕಾಶ, ನೇರ ಸಂದರ್ಶನಕ್ಕೆ ಹಾಜರಾಗಿ
ವೇತನ ಶ್ರೇಣಿ ಹಾಗೂ ವಿದ್ಯಾರ್ಹತೆ
ಬೆರಳಚ್ಚುಗಾರ ಹುದ್ದೆಗೆ 21,400- 42,000 ರೂ.. ಈ ಹುದ್ದೆಗೆ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕÀು.
ಶೀಘ್ರ ಲಿಪಿಕಾರ ಹುದ್ದೆಗೆ 27,650- 52,650 ರೂ. ಈ ಹುದ್ದೆಗೆ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕÀು.
ವಯೋಮಿತಿ
ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ತುಂಬಿರಬೇಕು. 40 ವರ್ಷ ಮೀರಿರಬಾರದು. ಮಾಜಿ ಸೈನಿಕರು/ ಅಂಗವಿಕಲರು/ ವಿಧವೆಯರಿಗೆ, ನಿಯಮಾನುಸಾರ ಗರಿಷ್ಠ ವಯೋಮಿರಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವ ವಿಳಾಸ
ನಿಗದಿತ ನಮೂನೆಯಲ್ಲಿ ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್
ಪಶ್ಚಿಮ, ಬೆಂಗಳೂರು-560020 ಇವರಿಗೆ ವಿಳಾಸಿಸಿ ಖುದ್ದಾಗಿ ಸಾರ್ವಜನಿಕ ಸಂಪರ್ಕಾಧಿಕಾರಿಗಳ ಕಚೇರಿಗೆ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳಿಗೆ ಸೂಚನೆಗಳು
- ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
- ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ /ಸೇರ್ಪಡೆ ಮಾಡುವಂತೆ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯ ದೃಢೀಕೃತ ಅಂಕಪಟ್ಟಿ. ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿಗಳು. ಜಾತಿ ದೃಢೀಕರಣ ಪತ್ರ ಇವುಗಳನ್ನು ಲಗತ್ತಿಸಬೇಕು.
CLICK HERE NOTIFICATION