
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಎಂ.ಆರ್.ಎಸ್. ವಿದ್ಯುತ್ ವಿತರಣೆ ಕೇಂದ್ರದಲ್ಲಿ 66 ಕೆ.ವಿ. ಡಿವಿಜಿ-1 ಪ್ರಸರಣ ಮಾರ್ಗದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 22 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
READ | ಅಡಿಕೆ ಮರದಿಂದ ಸೋಫಾ ಸೆಟ್ ತಯಾರಿಸಿ ಯುವಕ, ಕಾಯಿಲೆಯಿಂದ ಹೊಳೆದ ಐಡಿಯಾ ಈಗ ಸಕ್ಸಸ್
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾರೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೆಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲೂ ವ್ಯತ್ಯಯ
SHIMOGA: ನ.22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 6 ಗಂಟೆಯವರೆಗೆ ಮೇಧಾರಕೇರಿ, ಜೈಲ್ ಕಾಂಪೌಂಡ್ ಮುಂಭಾಗ, 100ಅಡಿ ರಸ್ತೆ, ಪೊಲೀಸ್ ಚೌಕಿ, ಅರವಿಂದನಗರ, ನಾಗೇಂದ್ರ ಕಾಲೋನಿ, ಪೃಥ್ವಿ ಮ್ಯಾನ್ಷನ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.