
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದು, ಕನ್ನಡ ಮತ್ತು ಕನ್ನಡಿಗರನ್ನು ಹೊಗಳಿದಿದ್ದಾರೆ. ಅದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ.
ಮೋದಿ ಟ್ವೀಟ್ನಲ್ಲಿ ಏನಿದೆ?
“ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ.” ಎಂದು ಶುಭ ಕೋರಿದ್ದಾರೆ.
ಮೋದಿ ಅವರು ನ.1ರಂದು ಬೆಳಗ್ಗೆ 9.16 ಗಂಟೆಗೆ ಟ್ವೀಟ್ ಮಾಡಿದ್ದು, ಕೆಲವೇ ಗಂಟೆಗಳಲ್ಲಿ 251.8 ಸಾವಿರ ಜನ ವೀಕ್ಷಿಸಿದ್ದಾರೆ. 1.6 ಸಾವಿರ ಜನ ರೀಪೋಸ್ಟ್ ಮಾಡಿದ್ದಾರೆ.