Fata-Fat news | ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನ ಕರೆಂಟ್ ಇರಲ್ಲ, ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ, ಮೆಸ್ಕಾಂ ಜನಸಂಪರ್ಕ ಸಭೆ

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ನ.2 ಮತ್ತು 3 ರಂದು ಮಧ್ಯಾಹ್ನ 12.30 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

READ | ಶಿವಮೊಗ್ಗದಿಂದ ಹೈದ್ರಾಬಾದ್, ಗೋವಾ, ತಿರುಪತಿಗೆ ವಿಮಾನ ಹಾರಾಟಕ್ಕೆ ಹೊಸ ಡೇಟ್ ಘೋಷಣೆ, ವೇಳಾಪಟ್ಟಿ, ದರದ ಮಾಹಿತಿ ಇಲ್ಲಿದೆ

ಸೊರಬಲ್ಲಿ ಮೆಸ್ಕಾಂ ಜನ ಸಂಪಕ ಸಭೆ

MESCOM

SORAB: ಸೊರಬ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ನ.3 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289518.

ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Apply

SHIMOGA: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ ಹಾಗೂ ನಗದು ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಕ್ರೀಡಾ ಕ್ಷೇತ್ರದಲ್ಲಿ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಏಕಲವ್ಯ ಪ್ರಶಸ್ತಿ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನ ಹಾಗೂ ಕ್ರೀಡೆಗೆ ಪ್ರೋತ್ಸಾಹಿಸುವ ಪೋಷಕ/ ಸಂಸ್ಥೆಗಳಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಆಸಕ್ತ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆ ಅರ್ಜಿಯನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿರುವ ಇಲಾಖಾ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 20 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-223328ನ್ನು ಸಂಪರ್ಕಿಸಬಹುದಾಗಿದೆ.

error: Content is protected !!