POCSO Case | ಮೂರು ವರ್ಷದ ಬಾಲಕಿ ಮೇಲೆ ದೌರ್ಜನ್ಯ, ತೀರ್ಪು ನೀಡಿದ FTSC ನ್ಯಾಯಾಲಯ

Judgement

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 1 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಶಿವಮೊಗ್ಗದ FTSC-1 (Fast Track Special Court) ನ್ಯಾಯಾಲಯ ಆದೇಶಿಸಿದೆ.

READ | ಶಿವಮೊಗ್ಗದಲ್ಲಿ ಅಪರೂಪದ ಕರಿ‌ಮರ ನಾಟಾ ಸೀಜ್, ಕರ್ನಾಟಕದಲ್ಲೇ‌ ಇದು ಮೊದಲ ಕೇಸ್

2021ರಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ತನಿಖಾಧಿಕಾರಿ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಜೆ.ಲಕ್ಷ್ಮಣ್ ಅವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು, ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧಿಶರಾದ ಲತಾ ತೀರ್ಪು ನೀಡಿದರು. ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್, ಮಮತಾ ವಾದ ಮಂಡಿಸಿದ್ದರು‌.

error: Content is protected !!