Court news | ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ್ದ ರೌಡಿಶೀಟರ್ ಬಚ್ಚಾಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Shivamogga Court

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ವಾರಂಟ್ ನೀಡಲು ಬಂದಿದ್ದ ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ್ದ ಪ್ರಕರಣದ ಆರೋಪಿಯ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಾಧೀಶ ಕೆ.ಮಾನು ತೀರ್ಪು ನೀಡಿದರು.
ಟಿಪ್ಪುನಗರ ನಿವಾಸಿ ಜಮೀರ್ ಅಲಿಯಾಸ್ ಬಚ್ಚಾ ಅಲಿಯಾಸ್ ಬಚ್ಚನ್ (26) ಎಂಬಾತನಿಗೆ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹20,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 2 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

Crime logo

READ | ಚಿಕ್ಕಮ್ಮನ ತಾಳಿಯನ್ನೇ ದೋಚಿದ ಭೂಪ, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸ್

ದಾವಣಗೆರೆ ನ್ಯಾಯಾಲಯದಿಂದ ವಾರಂಟ್ ಜಾರಿ
ಬಚ್ಚಾ ವಿರುದ್ಧ ದಾವಣಗೆರೆಯ 1ನೇ ಜೆಎಂಎಫ್.ಸಿ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಪರಶುರಾಮಪ್ಪ, ಸತೀಶ್ ವಾರೆಂಟ್ ಜಾರಿಗಾಗಿ ಆರೋಪಿ ಬಚ್ಚನ್ ನ ಮನೆಯ ಬಳಿ ಬಂದಿದ್ದಾಗ ಆರೋಪಿತನು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಅವರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ತಳ್ಳಿ ಜೀವಬೆದರಿಕೆ ಹಾಕಿರುತ್ತಾನೆಂದು ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ತೆರಯಲಾಗಿದ್ದು, ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 22 ಪ್ರಕರಣಗಳು ದಾಖಲಾಗಿವೆ.
ಆಗಿನ ತನಿಖಾಧಿಕಾರಿ ಶಿವಮೊಗ್ಗ ಗ್ರಾಮಾಂತರ ವೃತ್ತ ಪೊಲೀಸ್ ನಿರೀಕ್ಷಕ ಗಂಗಾಧರಪ್ಪ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.

error: Content is protected !!