ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಒಂದೇ ಕ್ಲಿಕ್ ನಲ್ಲಿ ಹಲವು ಸುದ್ದಿಗಳನ್ನು ನೀಡುವ ಪ್ರಯತ್ನವೇ ‘ಫಟಾ ಫಟ್ ನ್ಯೂಸ್’. ಇಲ್ಲಿ ಕಣ್ತಪ್ಪಬಹುದಾದ ಹತ್ತಾರು ಸಣ್ಣಪುಟ್ಟ ಸುದ್ದಿಗಳನ್ನು ಓದುಗರಿಗೆ ನೀಡಲಾಗುವುದು. ಒಂದೆರಡು ನಿಮಿಷದಲ್ಲಿ ಹತ್ತು ಹಲವು ವಿಚಾರಗಳನ್ನು ಈ ಮೂಲಕ ತಿಳಿದುಕೊಳ್ಳಬಹುದು. ಅದರಲ್ಲೂ ಸರ್ಕಾರದ ಹಲವು ಯೋಜನೆ, ಅರ್ಜಿ ಆಹ್ವಾನ, ನಡೆಯುವ ಕಾರ್ಯಕ್ರಮಗಳು ಇಂತಹ ಎಲ್ಲ ಸುದ್ದಿಗಳನ್ನು ಕೊಡಲಾಗುವುದು. ಈ ಪ್ರಯತ್ನ ಓದುಗರಿಗೂ ಹತ್ತಿರವಾಗುತ್ತದೆ ಎಂಬ ವಿಶ್ವಾಸ ಇದೆ.
ಪಾಲಿಮನೆ ನಿರ್ಮಿಸಲು ಅರ್ಜಿ ಆಹ್ವಾನ
SHIMOGA: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.2 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸುವುದು.
ಸಾಗರದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ
SAGAR: ಮೆಸ್ಕಾಂ ಸಾಗರ ನಗರ ಉಪವಿಭಾಗ ಕಚೇರಿಯಲ್ಲಿ ನ.21ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9448289516.
ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ
SHIMOGA: 2023-24ನೇ ಸಾಲಿನ ಮಹಿಳಾ ತರಬೇತಿ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು, ಕರ್ನಾಟಕ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವೆಬ್‍ಸೈಟ್ ನಲ್ಲಿ ನೋಂದಣಿಯಾಗಿ ತರಬೇತಿ ಕೇಂದ್ರ ಮತ್ತು ಜಾಬ್ ರೋಲ್‍ಗಳಿಗೆ ಮಾನ್ಯತೆ ಪಡೆದ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆಲ್ಕೊಳ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ
SHIMOGA: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.21 ಮತ್ತು 22 ರಂದು ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಕರಾಟೆ ಪಂದ್ಯಾವಳಿಯನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ನೆರೆವೇರಿಸುವರು.
ನೇರ ಸಂದರ್ಶನಕ್ಕೆ ಕರೆ
SHIMOGA: ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನ.20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ನಿಗಧಿತ ಸಮಯದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಪನ್ಯಾಸಕ ನಾಗರ್ಷಗೆ ಡಾಕ್ಟರೇಟ್
SHIMOGA: ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂನಾಗರ್ಷ ಇವರು ರಸಾಯನಶಾಸ್ತ್ರ ವಿಭಾಗದಲ್ಲಿ ವಿಶೇಷ ಸಂಶೋಧನೆ ನಡೆಸಿ “ಸೈಸ್ಥೆಸಿಸ್, ಕ್ಯಾರಕ್ಟರೈಸೇಷನ್ ಆಫ್ ನ್ಯಾಫ್ತೆಫ್ಯೂರಾನ್ ಡಿರೈವೇಟಿವ್ಸ್ ಆ್ಯಂಡ್ ದೇರ್ ಫಾರ್ಮಕೋಲಾಜಿಕಲ್ ಆಕ್ಟಿವಿಟೀಸ್” ಎಂಬ ವಿಷಯದ ಮೇಲೆ ಮಂಡಿಸಿದ್ದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರಿಗೆ ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ಡಾ. ಕೆ.ಪಿ.ಲತಾ ಮಾರ್ಗದರ್ಶನ ಮಾಡಿರುತ್ತಾರೆ.
ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
SHIMOGA: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ನ.29 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಕಚೇರಿ ದೂರವಾಣಿ ಸಂಖ್ಯೆ : 08182-295514 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
HSRP | ಎಚ್.ಎಸ್.ಆರ್.ಪಿ ಗಡುವು ವಿಸ್ತರಣೆ, ಕೊನೆಯ ದಿನಾಂಕ ಯಾವುದು? ಇದುವರೆಗೆ ಎಷ್ಟು ಜನ ಅಳವಡಿಸಿಕೊಂಡಿದ್ದಾರೆ?