Yuva samsath | ಶಿವಮೊಗ್ಗದ ಇಬ್ಬರು ರಾಜ್ಯಮಟ್ಟದ ಯುವ ಸಂಸತ್ತಿಗೆ ಆಯ್ಕೆ, ಯಾರಿಗೆಲ್ಲ‌ ಬಹುಮಾನ? ಹೇಗಿತ್ತು ಚರ್ಚೆ?

Jilla Yuva samsath

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಲವರಿಗೆ ಸಮಾಧಾನಕರ ಬಹುಮಾನ ನೀಡಲಾಗಿದೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು
ಸಾಗರ ತಾಲ್ಲೂಕಿನ ಸುಭಾಷ್‍ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ಜಿ.ಭೂಮಿಕಾ ಪ್ರಥಮ ಮತ್ತು ಶಿವಮೊಗ್ಗ ತಾಲ್ಲೂಕು ಪಿಳ್ಳಂಗಿರಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರಜ್ವಲ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಮಾಧಾನಕರ ಬಹುಮಾನ
ಸುಭಾಷ್‍ನಗರ ಸರ್ಕಾರಿ ಪ್ರೌಢಶಾಲೆಯ ಬಿ.ಎಸ್. ಶೃತಿ ತೃತೀಯ, ಹೊಸನಗರ ತಾಲ್ಲೂಕಿನ ಮಸಗಲ್ಲಿ ಸ.ಪ್ರೌ.ಶಾ ಯ ವಿದ್ಯಾರ್ಥಿನಿ ಕೆ.ಸಹನ ನಾಲ್ಕನೇ, ಮಾಸೂರು ಶಾಲೆಯ ಕೆ.ಜಿ.ನವ್ಯ ಐದನೇ ಮತ್ತು ಕೊಮ್ಮನಾಳ್ ಶಾಲೆಯ ಜಿ.ಹರ್ಷಿತಾ ಆರನೇ ಬಹುಮಾನ ಪಡೆದುಕೊಂಡರು.

READ | ಶಿವಮೊಗ್ಗದಲ್ಲಿ ಸ್ವದೇಶಿ ಮೇಳ ಆಯೋಜನೆ, ಮಳಿಗೆ ಬುಕಿಂಗ್ ಆರಂಭ, ಯಾವಾಗಿಂದ ನಡೆಯಲಿದೆ ಮೇಳ?

ಸಂಸತ್ ಅಧಿವೇಶನದಂತೆ ನಡೆದ ಯುವ ಸಂಸತ್ ಸ್ಪರ್ಧೆ
ಆಡಳಿತ ಪಕ್ಷದ ವಿಷಯ ಮಂಡನೆಗಳು, ವಿರೋಧ ಪಕ್ಷದ ಪ್ರಶ್ನೆ ಮತ್ತು ಚರ್ಚೆಗಳು, ಪರ ವಿರೋಧದ ಅಲೆಗಳು ಒಟ್ಟಾರೆ ಯುವ ಸಂಸತ್ತಿನ ಕಲಾಪಗಳು ಸಂಸತ್ತಿನ ಅಧಿವೇಶನವನ್ನು ನೆನಪಿಸುವಂತಿತ್ತು.
ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಹಾಗೂ ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಯುವ ಸಂಸದೀಯ ಪಟುಗಳು ಉತ್ತಮವಾಗಿ ತಮ್ಮ ಪಾತ್ರ ನಿರ್ವಹಣೆ ಮಾಡಿದರು.
ಮಾಸೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯಾದ ನವ್ಯ ಕೆ.ಜಿ ಸಭಾಪತಿಯಾಗಿ ಉತ್ತಮವಾಗಿ ಅಧಿನವೇನದ ಕಲಾಪಗಳನ್ನು ನಡೆಸಿಕೊಟ್ಟರು.
ಆರಂಭದಲ್ಲಿ ರಾಜಕಾರಣಿ ಸುಭದ್ರಮ್ಮನವರಿಗೆ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಸಂತಾಪ ಸೂಚಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಗೃಹಲಕ್ಷ್ಮಿ ಯೋಜನೆಯಡಿ ಇನ್ನೂ ಹಲವಾರು ಮಹಿಳಾ ಫಲಾನುಭವಿಗಳ ಖಾತೆಗೆ ಹಣ ಮಂಜೂರಾಗಿಲ್ಲ. ತಮ್ಮದು ಕೇವಲ ಹುಸಿ ಭರವಸೆ ನೀಡುವ ಸರ್ಕಾರ ಎಂದು ಮೂದಲಿಸಿದರು.
ಸುಭಾಷ್‍ನಗರ ಸರ್ಕಾರಿ ಪ್ರೌಢಶಾಲೆಯ ಭೂಮಿಕಾ ಮುಖ್ಯಮಂತ್ರಿ ಪಾತ್ರ ನಿರ್ವಹಿಸಿ, ನಮ್ಮದು ಮೌಲ್ಯಾಧಾರಿತ ರಾಜಕಾರಣ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಅರ್ಹ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆಯಾಗಲಿದೆ ಎಂದು ಸಮರ್ಥಿಸಿಕೊಂಡರು.

one click many news logo ಶಿಕ್ಷಕರ ಹುದ್ದೆಗಳ ಭರ್ತಿ
ಶಿಕ್ಷಣ ಮಂತ್ರಿಗಳನ್ನುದ್ದೇಶಿಸಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 55 ಸಾವಿರ ಶಿಕ್ಷಕರ ಕೊರತೆ ಇದೆ. ಇದಕ್ಕೆ ಸರ್ಕಾರದ ಕ್ರಮ ಏನು? ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ಓರ್ವವಿರೋಧ ಪಕ್ಷದ ಸದಸ್ಯರು ಪ್ರಶ್ನಿಸಿದರೆ, ಮತ್ತೋರ್ವ ಸದಸ್ಯರು ಎಸ್‍ಎಸ್‍ಎಲ್‍ಸಿ ಯಲ್ಲಿ ಮೂರು ಪ್ರಯತ್ನದ ಪರೀಕ್ಷೆ ಅಗತ್ಯವಿತ್ತೇ, ಜಿಪಿಟಿ ಶಿಕ್ಷಕರಿಗೆ ಜವಾಬ್ದಾರಿ ನೀಡುತ್ತಿಲ್ಲ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಕರ ಕೊರತೆ ಇದೆ. ಈ ಬಗ್ಗೆ ಕ್ರಮ ಏನು ಎಂದು ಪ್ರಶ್ನಿಸಿದರು.
ವಿರೋಧ ಪಕ್ಷದ ನಾಯಕಿ ಎಸ್.ಶೃತಿ, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ನೀಡುತ್ತಿಲ್ಲ. ಕೇವಲ ಭರವಸೆ ನೀಡಿದರೆ ಸಾಲದು, ಅದನ್ನು ಜಾರಿಗೊಳಿಸಬೇಕೆಂದರು
ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ನಾಯಕಿ ನಮ್ಮ ರಾಜ್ಯದ ಬರಗಾಲ ಪೀಡಿತ ಜಿಲ್ಲೆಗಳು ಮತ್ತು ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನಿಸಿದರು.
ಕಂದಾಯ ಸಚಿವರು ಉತ್ತರಿಸಿ, 151 ತಾಲ್ಲೂಕುಗಳನ್ನು ತೀವ್ರ ಬರಗಾಲ ಮತ್ತು 34 ತಾಲ್ಲೂಕುಗಳನ್ನು ಸಾಧಾರಣ ಒಟ್ಟು 195 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವೆಡೆ ಮೋಡ ಬಿತ್ತನೆ ಮಾಡಲಾಗಿದೆ. ಬೆಳೆ ಸಮೀಕ್ಷೆ, ಬೆಳೆ ವಿಮೆಯನ್ನು ಮಾಡಿಸಲಾಗಿದೆ ಎಂದರು.

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!