Job in shivamogga | ಶಿವಮೊಗ್ಗದ ಗೃಹರಕ್ಷಕ ದಳದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶ?

home guards

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ಧ ಹಾಗೂ ಸಮವಸ್ತ್ರಧಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಒಟ್ಟು 171 ಮತ್ತು ಮಹಿಳೆ 8 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.8 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

READ | ಸಕ್ರೆಬೈಲು ಬಿಡಾರದಲ್ಲಿ ಆನೆಯಿಂದ ಬಿದ್ದ ಮಾವುತ, ಹೇಗೆ ನಡೀತು ಘಟನೆ?

ಎಲ್ಲಿ ಎಷ್ಟು ಹುದ್ದೆ ಖಾಲಿ, ಯಾರನ್ನು ಸಂಪರ್ಕಿಸಬೇಕು?

  • ಶಿವಮೊಗ್ಗದಲ್ಲಿ ಪುರುಷ 39, ಮಹಿಳೆ 6 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: -9880705966. ಕುಂಸಿ ಪುರುಷ 5 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಪುರುಷ 8 ಘಟಕಾಧಿಕಾರಿ ಸಿ.ಮಧು -9686631428.
  • ಭದ್ರಾವತಿ ಪುರುಷ 17, ಮಹಿಳೆ 2 ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಪುರುಷ 6, ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಪುರುಷ 11 ಘಟಕಾಧಿಕಾರಿ ಎಚ್.ಎಸ್.ಸುನೀಲ್ ಕುಮಾರ್ -8105840345.
  • ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಎಚ್.ಪಿ.ರಾಘವೇಂದ್ರ -9535388472.
  • ಸಾಗರ ಪುರುಷ 13 ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 05 ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 07 ಘಟಕಾಧಿಕಾರಿ ಎಂ.ರಾಘವೇಂದ್ರ -9632614031.
  • ಶಿಕಾರಿಪುರ ಪುರುಷ 9 ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 05 ಘಟಕಾಧಿಕಾರಿ ಸೈಯದ್ ಇಸಾಕ್ -8861492078.
  • ಹೊಸನಗರ ಪುರುಷ 11 ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‍ಪೇಟೆ ಪುರುಷ 11 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689.
  • ಸೊರಬ ಪುರುಷ 14 ಘಟಕಾಧಿಕಾರಿ ಬಿ.ರೇವಣಪ್ಪ -9945066084.

ಹೊಂದಿರಬೇಕಾದ ಅರ್ಹತೆಗಳು
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಂದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.

error: Content is protected !!