ಸುದ್ದಿ ಕಣಜ.ಕಾಂ ಶಿವಮೊಗ್ಗ
00: ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್ 1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ.
READ | ಮಧ್ಯ ಕರ್ನಾಟಕದ ಮೊದಲ ಹ್ಯೂಮನ್ ಮಿಲ್ಕ್ ಬ್ಯಾಂಕ್ ಶಿವಮೊಗ್ಗದಲ್ಲಿ ಆರಂಭ, ಏನೇನು ವಿಶೇಷ?
ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳಿವು
- 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಉತ್ತಮ ವೈದ್ಯಕೀಯ ಸ್ವಚ್ಛತೆ ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಗಳು ಅಗತ್ಯವಾಗಿದೆ.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರಿಕರು/ ದುರ್ಬಲರು/ ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು.
- ಅಂತರÀರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
- ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ. ಅಥವಾ 24/7 ಉಚಿತ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದೆ.