ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ.
READ | ಶಿವಮೊಗ್ಗದಲ್ಲಿ ಜಿಲ್ಲಾಡಳಿತದಿಂದ ಕರೋನಾ ರಿಪೋರ್ಟ್ ರಿಲೀಸ್, ಇಬ್ಬರಿಗೆ ಸೋಂಕು, ಎಷ್ಟು ಸಕ್ರಿಯ ಪ್ರಕರಣಗಳಿವೆ?
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪಾರ ಜಿಲ್ಲಾಧಿಕಾರಿ ಸಿದ್ದಲಿಂಗರಡ್ಡಿ, ಡಿ.ಡಿ.ಪಿ.ಐ ಪರಮೇಶ್ವರಪ್ಪ ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಆ ದಿನ ಮೂಲ ದಾಖಲೆಯೊಂದಿಗೆ ಹಾಜರಾಗಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂ. 08182-222630ನ್ನು ಸಂಪರ್ಕಿಸುವಂತೆ ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.