ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರೋಟರಿ ಕ್ಲಬ್ (Rotary Club) ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆ(Sarji Hospital)ಗಳ ಸಮೂಹದ ಸಹಯೋಗದೊಂದಿಗೆ ಇಲ್ಲಿನ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ(Sarji Moather and Child Hospital) ಯಲ್ಲಿ ಡಿ.20 ರಂದು ಬೆಳಗ್ಗೆ 11 ಗಂಟೆಗೆ ‘ಅಮೃತ ಬಿಂದು (Amrutha Bindu)’ ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್(Breast milk bank)ನ್ನು ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ ಸರ್ಜಿ ತಿಳಿಸಿದರು.
READ | ಶಿವಮೊಗ್ಗ ವಿಮಾನ, ರೈಲು ನಿಲ್ದಾಣಕ್ಕೆ ಶೀಘ್ರವೇ ನಾಮಕರಣ, ಸಂಸದರ ಪ್ರಮುಖ 2 ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ಬೆಂಗಳೂರು ದಯಾನಂದ ಸಾಗರ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಆಶಾ ಬೆನಕಪ್ಪ ಆಗಮಿಸುವರು. ಶಿವಮೊಗ್ಗದ ಖ್ಯಾತ ವೈದ್ಯ ಡಾ.ಪಿ.ನಾರಾಯಣ್, ರಾಷ್ಟ್ರಿ?ಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ರೋಟರಿ ಕ್ಲಬ್ ಸೆಂಟ್ರಲ್ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಉಪಸ್ಥಿತರಿರುವರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಎಚ್.ಪಿ.ಶಿವರಾಜ್ ಅಧ್ಯಕ್ಷತೆ ವಹಿಸುವರು ಎಂದರು.
ಶಿವಮೊಗ್ಗದಲ್ಲೂ ಇದೆ ಬೇಡಿಕೆ
* ಅಂಕಿ ಅಂಶದ ಪ್ರಕಾರ ಶೇ.46 ರಷ್ಟು ನವಜಾತ ಶಿಶುಗಳಿಗೆ ಸಮರ್ಪಕವಾಗಿ ಸ್ತನ್ಯಪಾನವಾಗುತ್ತಿಲ್ಲ ಎಂದು ತಿಳಿದು ಬರುತ್ತಿದೆ. ಇದರ ಪರಿಣಾಮ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಅಥವಾ ಮೆದುಳಿನ ಬೆಳವಣಿಗೆ ಆಗಿರಬಹುದು, ಇವೆಲ್ಲದರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರ ಪ್ರಾಮುಖ್ಯತೆ ಅರಿತೇ ಎಲ್ಲ ನವಜಾತ ಶಿಶುಗಳಿಗೂ ತಾಯಂದಿರ ಎದೆಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಎದೆಹಾಲಿನ ಬ್ಯಾಂಕ್ನ್ನು ಪ್ರಪಂಚಾದ್ಯಂತ ಸ್ಥಾಪನೆ ಮಾಡಲಾಗಿದೆ. ಇದರ ನೇರ ಪ್ರಯೋಜನ ಅಗತ್ಯ ಪ್ರಮಾಣದಲ್ಲಿ ಎದೆಹಾಲು ಉತ್ಪತ್ತಿ ಮಾಡಲಾಗದ ತಾಯಿ ಹಾಗೂ ಎದೆಹಾಲು ವಂಚಿತವಾದ ಶಿಶುಗಳಿಗಾಗಿ ದಾನ ಮಾಡಿದ ಎದೆಹಾಲನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅಗತ್ಯ ಇರುವ ನವಜಾತ ಶಿಶುಗಳಿಗೆ ಪೂರೈಸುವ ಸಲುವಾಗಿ ಮಿಲ್ಕ್ ಬ್ಯಾಂಕ್ನ್ನು ಸ್ಥಾಪಿಸಲಾಗುತ್ತಿದೆ.
* 1909 ರಲ್ಲಿ ಮೊಟ್ಟ ಮೊದಲನೇ ತಾಯಿ ಎದೆಹಾಲಿನ ಬ್ಯಾಂಕ್ ಆರಂಭಗೊಂಡಿತು. 1989 ರಲ್ಲಿ ಏಷ್ಯಾದಲ್ಲಿ ಪ್ರಥಮ ಮಿಲ್ಕ್ ಬ್ಯಾಂಕ್ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ಸ್ಥಾಪನೆಗೊಂಡಿತು. 2020 ರವರೆಗೆ ವಿಶ್ವದ 66 ದೇಶಗಳಲ್ಲಿ 756 ಎದೆಹಾಲು ಸಂಗ್ರಹಣಾ ಬ್ಯಾಂಕ್ ಸ್ಥಾಪನೆಗೊಂಡಿದ್ದು, ಈ ಪೈಕಿ ಬ್ರೆಜಿಲ್ನಲ್ಲಿ 256 ಬ್ಯಾಂಕ್ಗಳಿವೆ. ಸಮೀಕ್ಷೆಯ ಪ್ರಕಾರ 2022 ರವರೆಗೆ ಭಾರತದಲ್ಲಿ 90 ಎದೆಹಾಲು ಬ್ಯಾಂಕ್ಗಳು ಸ್ಥಾಪನೆಗೊಂಡಿವೆ.
* ಬೆಂಗಳೂರಲ್ಲಿ ಇಂತಹ ಮಿಲ್ಕ್ ಬ್ಯಾಂಕ್ ಸ್ಥಾಪನೆ ಆಗಿತ್ತು. ಇತ್ತೀಚಿನ ವರ್ಷಗಳಲ್ಲಿ ಬೆಳಗಾವಿ, ಮಂಗಳೂರು, ಧಾರವಾಡದಂತಹ ನಗರದಲ್ಲಿ ತಾಯಂದಿರ ಎದೆಹಾಲಿನ ಸ್ಥಾಪನೆಗೊಂಡಿವೆ. ಕರ್ನಾಟಕದ ಮಧ್ಯ ಭಾಗದ ಬಯಲುಸೀಮೆ ಮತ್ತು ಮಲೆನಾಡ ಹೆಬ್ಬಾಗಿಲಾಗಿರುವ ಶಿವಮೊಗ್ಗದಂತಹ ಪ್ರಮುಖ ಸ್ಥಳದಲ್ಲಿ ಬ್ಯಾಂಕ್ ಕೊರತೆ ಕಾಡುತ್ತಿತ್ತು. ಇದರ ಪ್ರಯೋಜನ ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರಯೋಜನವಾಗಲಿದೆ.
ಎದೆಹಾಲು ದಾನದಿಂದ ತಾಯಿಗಾಗುವ ಲಾಭಗಳು
- ತಮ್ಮ ಜೀವ ರಕ್ಷಣೆಗಾಗಿ ಮತ್ತು ದುರ್ಬಲವಾಗಿರುವ ಶಿಶುಗಳ ಆರೋಗ್ಯ ಸುಧಾರಣೆಗೆ ನೆರವಾಗುತ್ತಿದ್ದಾರೆಂಬ ಸಂತೃಪ್ತಿ ಮತ್ತು ಸಂತೋಷದ ಮನೋಭಾವ ತಾಯಂದಿರಲ್ಲಿ ಒಡಮೂಡುತ್ತದೆ.
- ತಾಯಂದಿರು ಎದೆ ಹಾಲನ್ನು ನಿಯಮಿತವಾಗಿ ನೀಡುವುದರಿಂದ ಹೆರಿಗೆ ನಂತರದ ಖಿನ್ನತೆ, ಸ್ತನ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ ಮತ್ತು ಇತರ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ.
- ಯಾವುದಾದರೂ ಕಾರಣಗಳಿಂದ ಶಿಶುಗಳು ಬೇರ್ಪಟ್ಟಿದ್ದರೆ ಎದೆಹಾಲನ್ನು ದಾನ ಮಾಡುವುದರಿಂದ ತಾಯಂದಿರು ತಮ್ಮ ಎದೆಹಾಲಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬಹುದು.
- ಶಿಶುಗಳನ್ನು ಕಳೆದುಕೊಂಡಿರುವ ತಾಯಂದಿರು ಎದೆಹಾಲನ್ನು ದಾನ ಮಾಡುವುದು ಚಿಕಿತ್ಸಕ ಪ್ರಕ್ರಿಯೆಯಾಗಿದ್ದು, ಅದು ತಾಯಂದಿರು ದುಃಖವನ್ನು ಮರೆಯಲು ಮತ್ತು ಸಕ್ರಿಯವಾಗಿ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಳ್ಳಲು ಸಹಾಯವಾಗುತ್ತದೆ.
ಶಿಶುವಿಗೆ ಆಗುವ ಲಾಭಗಳು
- ಎದೆಹಾಲು ಶಿಶುಗಳಿಗೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವ ಮೂಲಕ ದೇಹದ ಸಮತೋಲನ ಮತ್ತು ಸಮಗ್ರ ಬೆಳವಣಿಗೆಗೆ ಪೂರಕವಾಗುತ್ತದೆ.
- ಎದೆ ಹಾಲಿನ ಸೇವನೆಯು ಶಿಶುಗಳಿಗೆ ದೇಹದಲ್ಲಿ ವಿವಿಧ ಸೋಂಕು ಮತ್ತು ರೋಗಗಳಿಂದ ರಕ್ಷಿಸುವ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.
- ಎದೆಹಾಲು ಕುಡಿಯುವ ಶಿಶುಗಳಲ್ಲಿ ಅಸ್ತಮಾ, ಅಲರ್ಜಿಗಳು, ಉಸಿರಾಟದ ಸೋಂಕುಗಳು, ಬಾಲ್ಯದ ರಕ್ತ ಕ್ಯಾನ್ಸರ್ ಮತ್ತು ಟೈಪ್- 2 ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳ ಅಪಾಯ ಕಡಿಮೆ ಇರುತ್ತದೆ.
- ಎದೆಹಾಲಿನಲ್ಲಿರುವ ಪೋಷಕಾಂಶಗಳು ಮತ್ತು ರೋಗ ನಿರೋಧಕ ಶಕ್ತಿಯು ಅವಧಿ ಪೂರ್ವ ಜನಿಸಿದ ಹಾಗೂ ಅನಾರೋಗ್ಯದಿಂದಿರುವ ಶಿಶುಗಳಿಗೆ ಹೆಚ್ಚು ಪ್ರಯೋಜನವಾಗುತ್ತದೆ, ಅಲ್ಲದೇ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗುತ್ತದೆ.
- ಸ್ತನ್ಯಪಾನವು (ದಾನವಾಗಿ ನೀಡಿದ ಎದೆಹಾಲು ಸ್ವಿ?ಕರಿಸುವುದು ಸೇರಿದಂತೆ) ಮಕ್ಕಳಲ್ಲಿ ಹೆಚ್ಚಿನ ಬೌದ್ಧಿಕ ಬೆಳವಣಿಗೆಗೆ ಸಹಾಯವಾಗುತ್ತದೆ.
- ಎದೆಹಾಲನ್ನು ಜೀರ್ಣಿಸಿಕೊಳ್ಳುವುದು ಸುಲಭ. ಶಿಶುಗಳಲ್ಲಿ ಮಲಬದ್ಧತೆ, ಅತಿಸಾರ ಮತ್ತು ಇತರ ಜಠರ, ಕರುಳಿನ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ