ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
READ | ಬೆರಳಚ್ಚು, ಶೀಘ್ರ ಲಿಪಿಕಾರ ಹುದ್ದೆಗಳ ಭರ್ತಿಗೆ ಅರ್ಜಿಿ ಅಧಿಸೂಚನೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಯಾವೆಲ್ಲೆ ಹುದ್ದೆಗಳು ಖಾಲಿ?
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಪ್ರತಿದಿನ ಕಚೇರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿಗೆ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.