ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್ ತಿಂಗಳು ಕೆಳಕಂಡ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
READ | ಸಾಗರದ ಈ ಕಾಲೇಜಿನಲ್ಲಿ ಅಡ್ಮಿಷನ್ ನಿರ್ಬಂಧ, ಕಾರಣವೇನು?
ಎಲ್ಲಿ, ಯಾವಾಗ ಅಹವಾಲು ಸ್ವೀಕಾರ?
ಡಿ. 19 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಸಾಗರ ತಾಲೂಕು ಪಂಚಾಯತ್ ಸಭಾಂಗಣ, ಡಿ. 20 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಡಿ. 21 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಹಾಗೂ ಡಿ. 27 ರಂದು ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.