ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.6 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.
ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ