KSRTC Bus stand | ಶಿವಮೊಗ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

doddapete

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ(Shimoga KSRTC Bus stand)ಕ್ಕೆ ಬಂದಿದ್ದ ವ್ಯಕ್ತಿಯೊಬ್ಬರ ಹಣ ಕದ್ದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ದಾವಣಗೆರೆ (Davanagere) ಚನ್ನಗಿರಿ (Channagiri) ಟೌನ್ ನಿವಾಸಿ ಶ್ರೀನಿವಾಸ್(55) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿತರಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣನಲ್ಲಿ ಕಳ್ಳತನವಾದ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವರದಿಯಾದ 3 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 30 ಸಾವಿರ ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

READ | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ವಾರೆಂಟ್, ಕಾರಣವೇನು? 

ಬಸ್ ಹತ್ತುವಾಗ ಹಣ ಕಳ್ಳತನ
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ವಾಸಿ ಎ ಚೌಡಪ್ಪ ಅವರು ಡಿಸೆಂಬರ್ 11ರಂದು ಮಧ್ಯಾಹ್ನ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಹರಪನಹಳ್ಳಿಗೆ ಹೋಗಲು ಬಸ್ ಹತ್ತುತ್ತಿರುವಾಗ ತುಂಬ ಜನ ಸಂದಣಿ ಇದ್ದು ಯಾರೋ ಕಳ್ಳರು ಅವರ ಜೇಬಿನಲ್ಲಿದ್ದ 37 ಸಾವಿ ರೂ. ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Crime logoತನಿಖೆ ಕೈಗೊಂಡ ತಂಡದ ಕಾರ್ಯಕ್ಕೆ ಶ್ಲಾಘನೆ
ಪ್ರಕರಣದಲ್ಲಿ ಕಳವಾದ ಹಣ ಹಾಗೂ ಆರೋಪಿತರ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ.ಕಾರಿಯಪ್ಪ ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಬಾಲರಾಜ್ ಮೇಲ್ವಿಚಾರಣೆಯಲ್ಲಿ ದೊಡ್ಡಪೇಟೆ ಠಾಣೆ ಪಿಐ ರವಿ ಪಾಟೀಲ್ ನೇತೃತ್ವದಲ್ಲಿ ಪಿ.ಎಸ್‍ಐ ಶ್ರೀನಿವಾಸ್, ಸಿಬ್ಬಂದಿ ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ, ಚಂದ್ರಾನಾಯ್ಕ, ನಿತಿನ್, ಪುನಿತ್, ಹೇಮಂತ್ ಅವರನ್ನು ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಕಾರ್ಯಕ್ಕೆ ಎಸ್.ಪಿ. ಪ್ರಶಂಸಿಸಿ ಅಭಿನಂದಿಸಿದ್ದಾರೆ.

error: Content is protected !!