ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ.28 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ ಎಂದು ಡಿ.ಐ.ಜಿ.ಪಿ. ನೇಮಕಾತಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
READ | ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆಯಲಿದೆ ಪರೀಕ್ಷೆ
ಹೇಗಿದೆ ವಸ್ತ್ರಸಂಹಿತೆ?
- ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಕಡ್ಡಾಯವಾಗಿ ಧರಿಸುವುದು.
- ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು.
- ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸಬಾರದು.
- ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸತಕ್ಕದ್ದಲ್ಲ.
- ಪರೀಕ್ಷಾ ಕೇಂದ್ರದೊಳಗೆ ಶೂಸ್ ಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು.
- ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ.