ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಫ್ರೀಡಂ ಪಾರ್ಕ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಮಪ್ರಭು ಅವರ ಶುಕ್ರವಾರ ಹೆಸರು ಘೋಷಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ನಗರದ ಫ್ರೀಡಂ ಪಾರ್ಕಿಗೆ ಶಿಕಾರಿಪುರದ ಬಳ್ಳಿಗಾವಿಯ ಅಲ್ಲಮಪ್ರಭುರವರ ಹೆಸರನ್ನು ಇಡುವಂತೆ ಮನವಿ ಮಾಡಿದ್ದು, ತಮ್ಮ ಅವಧಿಯಲ್ಲಿಯೇ ಹಳೇ ಜೈಲಿನ ಜಾಗದಲ್ಲಿ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಈ ಸ್ಥಳಕ್ಕೆ ಅನುಭವ ಮಂಟಪದ ಅಧ್ಯಕ್ಷ ‘ಅಲ್ಲಮ ಪ್ರಭು’ ಅವರ ಹೆಸರು ಇಡುವುದು ಸೂಕ್ತ ಎಂದು ಹೇಳಿದರು.
READ | ಶಿವಮೊಗ್ಗದಲ್ಲಿ ಕೆಎಫ್ಡಿಗೆ ಯುವತಿ ಬಲಿ, ನಾಲ್ಕು ವರ್ಷಗಳ ಬಳಿಕ ಮೊದಲ ಸಾವು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಎನ್.ಚನ್ನಬಸಪ್ಪ, ಫ್ರೀಡಂ ಪಾರ್ಕ್ ಯಡಿಯೂರಪ್ಪ ಅವರ ಕಾಲದಲ್ಲಿ ಆಗಿದೆ. ಹಳೇ ಜೈಲನ್ನು ಇಷ್ಟು ಸುಂದರವಾಗಿಸಲು ಅವರ ಕೊಡುಗೆ ಅಪಾರವಾಗಿದೆ. ಈಗಾಗಲೇ ಈ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಹೆಸರಿಡುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ, ಇದಕ್ಕೆ ಆಜಾದ್ ಹೆಸರು ಹೆಚ್ಚು ಸೂಕ್ತ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್, ಬಿ.ನಾಗೇಂದ್ರ, ಮಂಕಾಳ ಎಸ್.ವೈದ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾನಾಯಕ್, ಡಿ.ಎಸ್.ಅರುಣ್, ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಭೀಮಣ್ಣನಾಯ್ಕ, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ವರಿಷಾಧಿಕಾರಿಗಳು ವೇದಿಕೆಯಲ್ಲಿದ್ದರು.