ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA0: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(Police exam)ಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್/ ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ಜ.28ರಂದು ಬೆಳಗ್ಗೆ 11 ಗಂಟೆಯಿಂದ 12.30ರ ವರೆಗೆ ರಾಜ್ಯದಾದ್ಯಂತ ನಡೆಯಲಿದೆ. ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು. ಇಲ್ಲದಿದ್ದರೆ ಪರೀಕ್ಷಾ ಕೊಠಡಿ ಪ್ರವೇಶಿಸಲು ಅವಕಾಶ ಇರುವುದಿಲ್ಲ.
READ | ಶಿವಮೊಗ್ಗದಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಉತ್ತೇಜನಕ್ಕೆ ಮಾಸ್ಟರ್ ಪ್ಲ್ಯಾನ್
ಹೀಗೆ ಡ್ರೆಸ್ ಕೋಡ್
- ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್ ಗಳನ್ನು ಕಡ್ಡಾಯವಾಗಿ ಧರಿಸುವುದು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು.
- ಜಿಪ್ ಪ್ಯಾಕೆಟ್ ಗಳು, ದೊಡ್ಡ ಬಟನ್ ಗಳು ಇರುವ ಶರ್ಟ್ ಗಳನ್ನು ಧರಿಸತಕ್ಕದ್ದಲ್ಲ.
- ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಗಳನ್ನು ಧರಿಸತಕ್ಕದ್ದಲ್ಲ.
- ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಬಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.
- ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇದಿಸಲಾಗಿದೆ.