ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ವಾಪಸ್ ನೀಡಲು ಅವಕಾಶ ಕಲ್ಪಿಸಿದೆ.
ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ) ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ₹100 ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jumping spider | ಪಶ್ಚಿಮಘಟ್ಟದಲ್ಲಿ ಹೊಸ ಪ್ರಭೇದದ ‘ಜಂಪಿಂಗ್ ಸ್ಪೈಡರ್’ ಪತ್ತೆ