Covid 19 | 22 ಮೆಡಿಕಲ್ ಕಾಲೇಜು, 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ

SHARANAPRAKASH PATIL MINISTER

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೋವಿಡ್ (Covid 19) ಸಂಬಂಧ ಈಗಾಗಲೇ ಸಭೆ ನಡೆಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ 22 ಮೆಡಿಕಲ್ ಕಾಲೇಜು, 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೂಚನೆ ನೀಡಿದ್ದೆವೆ. ಎಲ್ಲ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ  ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಕೋವಿಡ್ ಪಾಸಿಟಿವ್ ರೇಟ್ ಜಾಸ್ತಿ ಇದೆ. 30 ಸಾವಿರ ವ್ಯಾಕ್ಸಿನೇಷನ್ ಲಭ್ಯವಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಆರೋಪ
ಹುಬ್ಬಳಿಯಲ್ಲಿ ಕರ ಸೇವಕನ ಬಂಧನ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷದವರಿಗೆ ಜನ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಕಾನೂತ್ಮಕವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆಯಬೇಕು. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕೇವಲ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರು ಮಾಡಿದ ಭ್ರಷ್ಟಾಚಾರ, ದುರಾಡಳಿಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗಲಾದರೂ ಬುದ್ಧಿ ಕಲಿತುಕೊಳ್ಳಬೇಕು ಎಂದರು.

Arecanut shell | ಅಡಿಕೆ ಬೆಳೆಗಾರರಿಗೆ ಶುಭಸುದ್ದಿ, ಶಬ್ದ ನಿರೋಧಕವಾಗಿಯೂ ಅಡಿಕೆ ಸಿಪ್ಪೆ ಬಳಕೆ!

error: Content is protected !!