Corporation board | ಶಿವಮೊಗ್ಗದ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಸ್ಥಾನ, ಸಂಪೂರ್ಣ ಪಟ್ಟಿ ಇಲ್ಲಿದೆ

BK Sangamesh Beluru gopalakrishna

 

 

SHIVAMOGGA: ಜಿಲ್ಲೆಯ ಸಾಗರ ಮತ್ತು ಭದ್ರಾವತಿ ಶಾಸಕರು ಸೇರಿ ರಾಜ್ಯದ 34 ಶಾಸಕರುಗಳನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಶುಕ್ರವಾರ ಆದೇಶಿಸಿದ್ದಾರೆ.
ಯಾರಿಗೆ ಯಾವ ನಿಗಮ?
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ ಲ್ಯಾಂಡ್ ಆರ್ಮಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಸಾಗರ ಶಾಸಕ ಬಿ.ಕೆ.ಗೋಪಾಲಕೃಷ್ಣ ಬೇಳೂರು ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

READ | ಶಿವಮೊಗ್ಗದ ಹೆಚ್ಚುವರಿ ಎಸ್.ಪಿಗೆ ಗಣರಾಜ್ಯೋತ್ಸವದ ಮೆಡಲ್

ಶಾಸಕರ ಹೆಸರು ನಿಗಮ
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ
ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಕರ್ನಾಟಕ ಸೋಪ್ ಆಂಡ್ ಡಿಟಜೆರ್ಂಟ್
ಕಾಗವಾಡ ಶಾಸಕ ಭರಮ ಗೌಡ ಕಾಗೆ ಹುಬ್ಬಳ್ಳಿ ಸಾರಿಗೆ ನಿಗಮ
ಬಾಗಲಕೋಟೆ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ಬಾಗಲಕೋಟೆ ಅಭಿವೃದ್ಧಿ ಪ್ರಾಧಿಕಾರ
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಕೆಎಸ್ ಆರ್.ಟಿ ಸಿ
ಬ್ಯಾಡಗಿ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಆಹಾರ ಮತ್ತು ನಾಗರೀಕ ಸರಬರಾಜು
ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ರೋಣ ಶಾಸಕ ಜಿ.ಎಸ್.ಪಾಟೀಲ್ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ
ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ್ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
ಬೀಳಗಿ ಶಾಸಕ ಜಿ.ಟಿ.ಪಾಟೀಲ್ ಹಟ್ಟಿ ಚಿನ್ನದ ಗಣಿ ನಿಯಮಿತ
ಶೋರಾಪುರ ಶಾಸಕ ರಾಜ ವೆಂಕಟ್ಟಪ್ಪ ನಾಯಕ್ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಕರ್ನಾಟಕ ಗ್ರಾಮೀಣ ಮೂಲಭೂತ ಅಭಿವೃದ್ಧಿ ನಿಗಮ ಹಾಗೂ ಲ್ಯಾಂಡ್ ಆರ್ಮಿ
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ  ಕರ್ನಾಟಕ ಗೃಹ ಮಂಡಳಿ
ಹುಬ್ಬಳ್ಳಿ ಧಾರವಾಡ ಪೂವ ಶಾಸಕ ಅಬ್ಬಯ್ಯ ಪ್ರಸಾದ್ ಕೊಳಚೆ ಅಭಿವೃದ್ಧಿ ಮಂಡಳಿ
ಸಾಗರ ಶಾಸಕ ಬಿ.ಕೆ.ಗೋಪಾಲಕೃಷ್ಣ ಬೇಲೂರು ಅರಣ್ಯ ಕೈಗಾರಿಕಾ ನಿಗಮ
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿ
ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಂಡಿ ಸಿದ್ದೇಗೌಡ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ
ಆನೇಕಲ್ ಶಾಸಕ ಬಿ.ಶಿವಣ್ಣ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರಾಜ್ಯ ಬೀಜ ನಿಗಮ
ಹೆಗ್ಗಡದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು ಜಂಗಲ್ ಲಾಡ್ಜ್
ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಮಂಡಳಿ
ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ
ಹುನಗುಂದ ಶಾಸಕ ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಕೆಜಿಎಫ್ ಶಾಸಕಿ ಎಂ.ರೂಪಕಲಾ ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಆಂಡ್ ಏಜೆನ್ಸಿಸ್
ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ
ಕಂಪ್ಲಿ ಶಾಸಕ ಜೆ.ಎಂ.ಗಣೇಶ್ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

error: Content is protected !!