Cabinet Meeting | ಶಿವಮೊಗ್ಗಕ್ಕೆ 22.50 ಕೋಟಿ ರೂ. ಮಂಜೂರು, ಸಂಪುಟದಲ್ಲಿ ಕೈಗೊಂಡ ಪ್ರಮುಖ 12 ನಿರ್ಧಾರಗಳು

Vidhan saudha

 

 

ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅವುಗಳು ಕೆಳಗಿನಂತಿವೆ.

one click many news logo

READ | ಯುವನಿಧಿಗೆ ಹೆಸರು ನೋಂದಾಯಿಸುವುದು ಹೇಗೆ? ಇಲ್ಲಿದೆ ಮಹತ್ವದ ಮಾಹಿತಿ

  1. ಶಿವಮೊಗ್ಗದ ತೆವರಚಟ್ನಳ್ಳಿ ಗ್ರಾಮದಲ್ಲಿ 22.50 ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡವನ್ನು ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
  2. ವನ್ಯಜೀವಿ ಅಂಗಾಂಗಗಳ ಮಾಲೀಕತ್ವದ ಪ್ರಮಾಣ ಪತ್ರ ಇರುವವರು ಮುಂದೆಯೂ ಇಟ್ಟುಕೊಳ್ಳಬಹುದು. ಪ್ರಮಾಣ ಪತ್ರ ಇಲ್ಲದವರು ಅವುಗಳನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಲು 3 ತಿಂಗಳು ಅವಕಾಶ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪ್ರಕ್ರಿಯೆ ಬಗ್ಗೆ ಸದ್ಯದಲ್ಲೇ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ.
  3. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‍ಸಿ ಅಧಿಸೂಚನೆ ಹೊರಡಿಸಲಿದ್ದು, ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  4. ಕೋವಿಡ್ ಮತ್ತು ನೇಮಕಾತಿ ವಿಳಂಬ ಆದ ಕಾರಣ ಈ ಸಡಿಲಿಕೆ ಒಂದು ಬಾರಿಗೆ ಮಾತ್ರ ಅನ್ವಯವಾಗಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
  5. ರಾಜ್ಯದಾದ್ಯಂತ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮಗಳ ನಾಮಫಲಕಗಳಲ್ಲಿ ಕನ್ನಡವನ್ನು ಶೇ 60ರಷ್ಟು ಬಳಸುವುದನ್ನು ಕಡ್ಡಾಯ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ’ಗೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
  6. ಕೇಂದ್ರ ಪ್ರವಾಸೋದ್ಯಮ ಇಲಾಖೆಯಿಂದ ಪ್ರಸಾದ್ ಯೋಜನೆಯಡಿ ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನದ ಅಭಿವೃದ್ಧಿ ಯೋಜನೆಯನ್ನು 45.70 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
  7. ನಬಾರ್ಡ್ ಯೋಜನೆಯಡಿ ಕೃಷಿ ಮಾರುಕಟ್ಟೆ ಇಲಾಖೆಯಿಂದ ಮೂರು ವಿವಿಧ ಎಪಿಎಂಸಿ ಸಮಿತಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು 33 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.
  8. ಬೆಂಗಳೂರು ನಗರ ಸಾರಿಗೆಯ ಗುಣಮಟ್ಟದ, ಸುರಕ್ಷಿತ, ವಿಶ್ವಾಸಾರ್ಹ, ಸ್ವಚ್ಛ ಮತ್ತು ಕೈಗೆಟುಕುವ ಪ್ರಯಾಣವನ್ನು ಒದಗಿಸಿ ಪ್ರವಾಸಿಗರನ್ನು ಮತ್ತು ಬೆಂಗಳೂರು ದರ್ಶನ ಸೇವೆಗಳಿಂದ ಹೆಚ್ಚುವರಿ ಪ್ರಯಾಣಿಕರನ್ನು ಆಕರ್ಷಿಸಲು ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‍ಗಳನ್ನು ಕೆ.ಟಿ.ಪಿ.ಪಿ ಕಾಯ್ದೆ ಮತ್ತು ನಿಯಮಗಳನ್ವಯ ಜಿ.ಸಿ.ಸಿ ಆಧಾರದ ಮೇಲೆ ಕಾರ್ಯಚರಣೆಗೆ ಇಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
  9. ಬೆಂಗಳೂರಿನಲ್ಲಿರುವ ಶತಮಾನ ಕಂಡಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ(ಯುವಿಸಿಇ) ಉನ್ನತೀಕರಣಗೊಳಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಲು 25 ಕೋಟಿ ರೂ. ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
  10. ಬೆಂಗಳೂರು ನಗರದ ರಸ್ತೆಗಳಲ್ಲಿ ಪದೇಪದೇ ದುರಸ್ತಿ ಮರುಕಳಿಸದಂತೆ ಯೋಜನೆ ರೂಪಿಸಲಾಗಿದ್ದು, ಮುಖ್ಯರಸ್ತೆ ಮತ್ತು ಉಪ ಮುಖ್ಯರಸ್ತೆಗಳಲ್ಲಿ ವೈಟ್‍ಟಾಪಿಂಗ್ ಮಾಡುವ 43 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.
  11. ಒಟ್ಟು 1,345 ಕಿ.ಮೀ ಉದ್ದದ ಮುಖ್ಯರಸ್ತೆಗಳಿದ್ದು, ಇದರಲ್ಲಿ 145 ಕಿ.ಮೀ. ರಸ್ತೆಯನ್ನು ಈಗಾಗಲೇ ವೈಟ್‍ಟಾಪಿಂಗ್ ಮಾಡಲಾಗಿದೆ.
  12. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‍ಡಿಎಲ್) ಆವರಣದಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

ಆರೋಗ್ಯ ಕಾರ್ಡ್ ವಿತರಣೆ
ಕೆಎಸ್‍ಡಿಎಲ್ ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಸಿಬ್ಬಂದಿಗೆ 5 ಲಕ್ಷ ರೂ.ದವರೆಗೆ ವೆಚ್ಚ ಭರಿಸುವ ಆರೋಗ್ಯ ಕಾರ್ಡ್ ವಿತರಿಸಿದರು.
ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜ.18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ. ಖರ್ಚಾಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ.

Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ

error: Content is protected !!