shamanur shivashankarappa  | ರಾಜಕೀಯ ವಲಯದಲ್ಲಿ ಶ್ಯಾಮನೂರು ಶಿವಶಂಕರಪ್ಪರ ಹೇಳಿಕೆ ಸಂಚಲನ, ರಾಘವೇಂದ್ರರನ್ನು ಗೆಲ್ಲಿಸುವಂತೆ ಬಹಿರಂಗ ಮನವಿ

Shamanur BY Raghavendra

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಐಕ ಶಾಮನೂರು ಶಿವಶಂಕರಪ್ಪ ಪ್ರಮುಖ ಹೇಳಿಕೆಯನ್ನು ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನವನ್ನೇ ಮೂಡಿಸಿದೆ.
ನಗರದ ಬೆಕ್ಕಿನಕಲ್ಮಠದಲ್ಲಿ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

CLICK TO SEE VIDEO REPORT 

READ | ಕೆಲಸ ಮಾಡಿದ ಚಿನ್ನದಂಗಡಿಗೇ ಕನ್ನ ಹಾಕಿದ್ದ ಭೂಪ, ಬಂಧನದ ಬಳಿಕ ಶಾಕ್!

ಶ್ಯಾಮನೂರು ಶಿವಶಂಕರಪ್ಪ ಹೇಳಿದ್ದೇನು?
“ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
“ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನು ಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು” ಎಂದರು.
ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದು ಹೇಳಿದರು.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಚ್.ಎಲ್.ಷಡಾಕ್ಷರಿ, ಧಾರವಾಹಿ ನಿರ್ದೇಶಕ ಪಿ.ಎನ್.ರುದ್ರಪ್ಪ, ವಿಶ್ವ ಯುವ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಡಾ. ಬಿ.ಜೆ.ಗಿರೀಶ್ ಅವರನ್ನು ಸನ್ಮಾನಿಸಲಾಯಿತು. ಹಿಂದೂಸ್ತಾನಿ ಗಾಯಕ ಹುಮಾಯೂನ್ ಹರ್ಲಾಪುರ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಸವಳಂಗ ಮೇಲ್ಸೇತುವೆ ಆರಂಭ
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಆಗುತ್ತಿದ್ದು, ಇಂದು ಸವಳಂಗ ರಸ್ತೆ ಮೇಲ್ಸೇತುವೆ ಉದ್ಘಾಟನೆಯಾಗಿದೆ. ಎಫ್.ಎಂ, ಹೆದ್ದಾರಿ ಕಾಮಗಾರಿ, ಪ್ರವಾಸಿ ತಾಣಗಳ ಅಭಿವೃದ್ಧಿ ಹೀಗೆ ನೂರಾರು ಅಭಿವೃದ್ಧಿ ಕೆಲಸಗಳು ಮಾಡಿದ್ದು, ಅಲ್ಲಮ ಪ್ರಭು ಜನ್ಮಸ್ಥಳ ಅಭಿವೃದ್ಧಿಗೆ ಕೇಂದ್ರದ ಪುರಾತತ್ವ ಇಲಾಖೆ ಒಪ್ಪಿಗೆ ನೀಡಿದ್ದು, 4 ಕೋಟಿ ವೆಚ್ಚದಲ್ಲಿ ಸರ್ಕಾರದ ವತಿಯಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ವಿಶ್ರಾಂತ ಪ್ರಾಧ್ಯಾಪಕ ಡಾ. ರಾಜೇಂದ್ರ ಚೆನ್ನಿ ಅವರು ಭಾವೈಕ್ಯತೆ ವಿಷಯ ಕುರಿತು ಉಪನ್ಯಾಸ ನೀಡಿದರು. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸವಣೂರು ಶ್ರೀ ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ಉಪಸ್ಥಿತರಿದ್ದರು. ಚನ್ನಗಿರಿ ಶ್ರೀ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಡಾ. ಬಸವ ಜಯಚಂದ್ರ ಸ್ವಾಮೀಜಿ ಮಾತನಾಡಿದರು.
ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ, ಸಿ.ಎಸ್.ಷಡಾಕ್ಷರಿ, ಇಂಪನಾ, ವೀರಣ್ಣ, ರಾಜಣ್ಣ, ಡಾ. ಪ್ರವೀಣ್ ದೇವರಬಾವಿ, ಡಿ.ಜಿ.ಬೆನಕಪ್ಪ ಪಾಲ್ಗೊಂಡಿದ್ದರು.
ಪರಮ ತಪಸ್ವಿ ಜಗದ್ಗುರು ಶ್ರೀ ಗುರು ಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಉಪಾಧ್ಯಕ್ಷ ಎನ್.ಜೆ.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಹಣಕಾಸು ಸಮಿತಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್.ಕೆ.ಆರ್., ಶೀಲಾ ಸುರೇಶ್, ಸಂತೋಷ್ ಬಳ್ಳೇಕೆರೆ, ರುದ್ರಯ್ಯ ಶಾಸ್ತ್ರಿ, ಶಾಂತಾ ಆನಂದ್, ಸುಜಯಾ ಪ್ರಸಾದ್, ಮತ್ತಿತರರು ಉಪಸ್ಥಿತರಿದ್ದರು.

Arecanut shell | ಅಡಿಕೆ ಬೆಳೆಗಾರರಿಗೆ ಶುಭಸುದ್ದಿ, ಶಬ್ದ ನಿರೋಧಕವಾಗಿಯೂ ಅಡಿಕೆ ಸಿಪ್ಪೆ ಬಳಕೆ!

error: Content is protected !!