ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ ಅವರು 2024ನೇ ಸಾಲಿನ ಗಣರಾಜ್ಯೋತ್ಸವ ನಿಮಿತ್ತ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
READ | ದಾವಣಗೆರೆ ಯುವಕನಿಗೆ ಶಿವಮೊಗ್ಗದಲ್ಲಿ ಶಿಕ್ಷೆ, ಕಾರಣವೇನು?
ಅನಿಲ್ ಕುಮಾರ್ ಭೂಮರಡ್ಡಿ ಅವರು 1994ನೇ ಸಾಲಿನಲ್ಲಿ ಪೊಲೀಸ್ ಉಪ ನೀರೀಕ್ಷಕರಾಗಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿದ್ದು, ನಂತರ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಇವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಪುರಸ್ಕೃತರಾಗಿರುತ್ತಾರೆ.
ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಅವರು ಜಿಲ್ಲಾ ಪೊಲೀಸ್ ವತಿಯಿಂದ ಅನಿಲ್ ಕುಮಾರ್ ಭೂಮರಡ್ಡಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.