ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಾಲಕಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.
2021ನೇ ಸಾಲಿನಲ್ಲಿ ದಾವಣಗೆರೆಯ ವಾಸಿ 27 ವರ್ಷದ ಯುವಕನು, 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಆಗಿನ ತನಿಖಾಧಿಕಾರಿಗಳಾದ ಭದ್ರಾವತಿ ಗ್ರಾಮಾಂತರ ಠಾಣೆ ಪಿಐ ಚೈತನ್ಯ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪತ್ರವನ್ನು ಸಲ್ಲಿಸಿದ್ದರು.
The Addl District and Sessions Court, FTSC–II (POCSO) ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹2,20,000 ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ದಂಡದ ಮೊತ್ತದಲ್ಲಿ ₹2,00,000 ಮತ್ತು ಪರಿಹಾರವಾಗಿ ₹2,00,000 ನೀಡಲು ಆದೇಶ ನೀಡಿರುತ್ತಾರೆ. ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ