Shivamogga news | ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಶಿವಮೊಗ್ಗದಲ್ಲಿ ಗೊಂದಲ, ಎಸ್.ಪಿ ಹೇಳಿದ್ದೇನು?

NEWS UPDATES

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHVAMOGGA: ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ನಗರದ ಶಿವಪ್ಪ ನಾಯಕ ವೃತ್ತದಲ್ಲಿ (ಎಸ್.ಎನ್. ವೃತ್ತ) ನಡೆದಿರುವ ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಎಸ್.ಎನ್. ವೃತ್ತದಲ್ಲಿ ಸೋಮವಾರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಿಹಿ ವಿತರಣೆ ಮಾಡುತ್ತಿದ್ದರು‌. ಆಗ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬಳು ಅಲ್ಲಾ ಹು ಅಕ್ಬರ್ ಎಂಬ ಘೋಷಣೆ ಕೂಗಿದ್ದಳು. ಘಟನೆ ಬೆನ್ನಲ್ಲೇ ಕೆಲಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಈ ಕುರಿತು ಎಸ್.ಪಿ ವಾಟ್ಸಾಪ್ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಎಸ್.ಪಿ ಹೇಳಿದ್ದೇನು?
ಘೋಷಣೆ ಕೂಗಿರುವ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆ 2018ರಿಂದ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ಜೊತೆಗೆ ಮಾನಸಿಕ ಕಾಯಿಲೆ‌ ಪಡೆಯುತ್ತಿರುವ ದಾಖಲೆಗಳನ್ನು ನೀಡಿದ್ದಾರೆ. ಪ್ರಸ್ತುತ ಸ್ಥಿತಿ ಶಾಂತಿಯುತವಾಗಿದೆ‌.

error: Content is protected !!