Bus service | ಸಾರ್ವಜನಿಕರೇ ಗಮನಿಸಿ, ಶಿವಮೊಗ್ಗದಲ್ಲಿ ಇಂದು ಬಸ್ ಸಂಚಾರದಲ್ಲಿ ವ್ಯತ್ಯಯ

ksrtc

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಜ.12 ರಂದು ಮುಖ್ಯಮಂತ್ರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಯ ಚಾಲನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 150 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

READ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಶಿವಮೊಗ್ಗದ ಹಲವು ರಸ್ತೆಗಳು ಬಂದ್, ಎಲ್ಲೆಲ್ಲಿ ಪಾರ್ಕಿಂಗ್ ವ್ಯವಸ್ಥೆ, ಯಾವ ರಸ್ತೆಯಲ್ಲಿ‌ ಸಂಚಾರ ಇರಲ್ಲ?

ಜ.12 ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!