Accident | ಸ್ನೇಹಿತನ ಹುಟ್ಟು ಹಬ್ಬದ ಆಚರಿಸಲು ತೆರಳುತ್ತಿದ್ದ ಇಬ್ಬರು ಯುವಕರ ದಾರುಣ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ

Accident

 

 

ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ತಾಲೂಕಿನ ಸೀಗೆಬಾಗಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಹುಟ್ಟು ಹಬ್ಬ ಆಚರಣೆಗೆಂದು ತೆರಖುವಾಗ ಘಟನೆ ಸಂಭವಿಸಿದೆ.
ತಾಲೂಕಿನ ಹೊನ್ನವಿಲೆ ನಿವಾಸಿ ಚೇತನ್ (29), ರಮೇಶ್ (25) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಚನ್ನಗಿರಿಯ ಮಾಡಾಳು ಗ್ರಾಮದ ಮನು (25) ಎಂಬುವವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್-ಬೊಲೆರೋಗೆ ಡಿಕ್ಕಿ
ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ಡಿ.31ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್‌ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆಗ ಸೀಗೆಬಾಗಿ ಗ್ರಾಮದ ಬಳಿ ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಲೆರೊ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Property parade | 2023ರಲ್ಲಿ ಶಿವಮೊಗ್ಗದಲ್ಲಿ ದಾಖಲಾದ ಕೇಸ್ ಗಳೆಷ್ಟು? ಕೋಟಿ ಕೋಟಿ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ

error: Content is protected !!