ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಆ್ಯಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ಜ.15ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ಜ10ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.
READ | ಯುವನಿಧಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು, ಏನೆಲ್ಲ ವ್ಯವಸ್ಥೆ ಮಾಡಲಾಗಿದೆ, ಜನರಿಗೆ ಏನೆಲ್ಲ ವ್ಯವಸ್ಥೆ ಮಾಡಲಾಗಿದೆ?
ನೀರು ಬಿಡುವ ವಿವರ
ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.
- ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಂದ 25 ರವರೆಗೆ 16 ದಿನ ನೀರು ಹರಿಸುವುದು. ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು.
- ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು.
- ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು.
- ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.
- ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು.
- ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು.
- ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು.
- ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು.