Yuva nidhi | ಯುವನಿಧಿ ಹಿಂದಿನ ಕಾರಣ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್, ಮಲೆನಾಡಿನ ಬೇಡಿಕೆ ಸಿಎಂ ಎದುರು ಮಂಡಿಸಿದ ಮಧು

DK Shivakumar Yuva nidhi

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಅಧಿಕೃತವಾಗಿ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಚಾಲನೆ ನೀಡಲಾಗಿದೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯೋಜನೆಯ ಹಿಂದಿನ ಉದ್ದೇಶ ಬಿಚ್ಚಿಟ್ಟಿದ್ದಾರೆ.
ಯುವನಿಧಿ ಹಿಂದಿನ ಉದ್ದೇಶವೇನು?

  • ನಿರುದ್ಯೋಗಿ ಭತ್ಯೆ ನೀಡುವುದಷ್ಟೇ ಯುವನಿಧಿಯ ಉದ್ದೇಶವಲ್ಲ. ಯುವಪೀಳಿಗೆಗೆ ಆರ್ಥಿಕವಾಗಿ ಸಬಲಗೊಳಿಸುವುದರೊಂದಿಗೆ ಕೌಶಲ ತರಬೇತಿಯೂ ನೀಡಲಾಗುವುದು.
  • ರಾಜ್ಯದಲ್ಲಿ 70 ಸಾವಿರ ಜನ ಯುವನಿಧಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಲಾಗುವುದು. ನಿರುದ್ಯೋಗಿಗಳಿಗೆ ಬಹುಬೇಡಿಕೆಯ ಕೌಶಲ ತರಬೇತಿ ನೀಡಲಾಗುವುದು. ಉದ್ಯೋಗಿಗಳಾಗದೇ ಉದ್ಯಮಿಗಳಾಗಬೇಕು.

ಸಿಎಂಗೆ ಮಲೆನಾಡಿಗರ ಬೇಡಿಕೆ ಸಲ್ಲಿಸಿದ ಮಧು
ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ನಗರದ ಹಳೆಯ ಜೈಲು ಕಟ್ಟಡದ ಈ ಆವರಣಕ್ಕೆ 12ನೇ ಶತಮಾನದ ಶೂನ್ಯ ಸಿಂಹಾಸನಾಧ್ಯಕ್ಷ, ವೈರಾಗ್ಯನಿಧಿ ಅಲ್ಲಮಪ್ರಭು ಅವರ ನಾಮಕರಣ ಮಾಡಬೇಕು. ಮಲೆನಾಡಿನ ಶರಾವತಿ ಸಂತ್ರಸ್ತರು, ಅರಣ್ಯ ಪ್ರದೇಶಗಳಲ್ಲಿ ಕೃಷಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ಸೇವಾ ಸಿಂಧುದಲ್ಲಿ ನೋಂದಾಯಿಸಿಕೊಳ್ಳಿ
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಯುವನಿಧಿ ಯೋಜನೆಗೆ ಈಗಾಗಲೇ ಸುಮಾರು 70 ಸಾವಿರ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದರು. ಪದವಿ, ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ಯುವಕರು ಕೂಡ ಯೋಜನೆ ಬಗ್ಗೆ ತಿಳಿದುಕೊಳ್ಳಬೇಕು. ಯುವ ನಿರುದ್ಯೋಗಿಗಳಿಗೆ ಕೇವಲ ಭತ್ಯೆ ನೀಡುವುದಷ್ಟೇ ಅಲ್ಲ, ಶಿಕ್ಷಿತ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ರಾಜ್ಯ, ರಾಷ್ಟ್ರ, ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯಕ್ರಮಕ್ಕೆ ಸೇವಾ ಸಿಂಧು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್, ಬಿ.ನಾಗೇಂದ್ರ, ಮಂಕಾಳ ಎಸ್.ವೈದ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾನಾಯಕ್, ಡಿ.ಎಸ್.ಅರುಣ್, ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಭೀಮಣ್ಣನಾಯ್ಕ, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ವರಿಷ್ಠಾಧಿಕಾರಿಗಳು ವೇದಿಕೆಯಲ್ಲಿದ್ದರು.

error: Content is protected !!