ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹೊಸನಗರದ 25 ವರ್ಷದ ಯುವಕನ ವಿರುದ್ಧದ ಆರೋಪಗಳು ದೃಢಪಟ್ಟಿದ್ದರಿಂದ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
READ | ಕೋವಿಡ್ ಚಿಕಿತ್ಸೆ ಪಡೆದ ವೈದ್ಯನಿಗೆ ಪರಿಹಾರ ನೀಡಲು ಇನ್ಶುರೆನ್ಸ್ ಕಂಪನಿ ಹಿಂದೇಟು, ಮುಂದೇನಾಯ್ತು?
2022ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನ ವಾಸಿ 25 ವರ್ಷದ ಯುವಕನು 15 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಬಿ.ಸಿ.ಗಿರೀಶ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು. ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಲತಾ ಅವರು ತೀರ್ಪು ನೀಡಿದ್ದಾರೆ.