DK Shivakumar | ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್, ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿ?

DK Shivakumar

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಫೆ.24ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ವಿಮಾನದ‌ ಮೂಲಕ ಹೊರಟು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.10 ಗಂಟೆಗೆ ಆಗಮಿಸುವರು. ಅಲ್ಲಿಂದ ರಸ್ತೆ ಮಾರ್ಗ ಮೂಲಕ 11.30ಕ್ಕೆ ಅಲ್ಲಮಪ್ರಭು ಬಯಲು ಮಂಟಪಕ್ಕೆ ಆಗಮಿಸುವರು. ಅಲ್ಲಿ ನಡೆಯುವ ಐದು ಗ್ಯಾರಂಟಿ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಸಂಜೆ 4.40ಕ್ಕೆ ವಿಮಾನದ ಮೂಲಕ ಹೈದ್ರಾಬಾದ್ ಗೆ ತೆರಳುವರು.

error: Content is protected !!