Navodaya | ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ದಿನಾಂಕ ಫಿಕ್ಸ್

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಜಿಲ್ಲೆ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಫೆ. 10 ರಂದು ನಡೆಸಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್‍ಸೈಟ್ ಮೂಲಕ ಪ್ರವೇಶ ಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಪ್ರಾಚಾರ್ಯೆ ಜಿ.ವಲ್ಲಿಯಮೈರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

READ |  ಶಿವಮೊಗ್ಗದಲ್ಲಿ ಕೆ.ಎಫ್.ಡಿ ಸ್ಫೋಟ, ಒಂದೇ ದಿನ 11 ಜನರಿಗೆ ಪಾಸಿಟಿವ್ , ಎಲ್ಲೆಲ್ಲಿ ಎಷ್ಟು ಕೇಸ್?

ಎಪಿಎಂಸಿ ಪರವಾನಿಗೆ ನವೀಕರಿಸಲು ಸೂಚನೆ

SHIMOGA: 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು ಇದೇ ವರ್ಷದ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ.
ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಿ ಅವಶ್ಯಕ ದಾಖಲೆಗಳೊಂದಿಗೆ ಫೆ.29 ರ ಒಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಫೆ.29 ರ ನಂತರ ಲೈಸೆನ್ಸ್ ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುದಿಲ್ಲ.
ಹೆಚ್ಚಿನ ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಎಪಿಎಂಸಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!