ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‍ಡಿ) ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿ (Helpline) ಬಿಡುಗಡೆ ಮಾಡಿದೆ.
ಕೆ.ಎಫ್.ಡಿ ಬಾಧಿತ ಪ್ರದೇಶದಲ್ಲಿ ಪಾಸಿಟಿವ್ ಬಂದಿದ್ದರೆ, ಕಾಯಿಲೆ ಲಕ್ಷಣಗಳಿದ್ದರೆ, ಮಂಗಗಳ ಸಾವಾದರೆ, ಆಂಬುಲೆನ್ಸ್ ಸೇವೆ ಬೇಕಿದ್ದರೆ ತಕ್ಷಣ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ (Gurudatta Hegde) ತಿಳಿಸಿದರು.
READ | ಶಿವಮೊಗ್ಗದಲ್ಲಿ ಒಂದೇ ದಿನ 11 ಜನರಿಗೆ ಕೆಎಫ್‍ಡಿ ಪಾಸಿಟಿವ್, ಜನರಲ್ಲಿ ಭೀತಿ, ಎಲ್ಲೆಲ್ಲಿ ಎಷ್ಟು ಪಾಸಿಟಿವ್?
ಶುಕ್ರವಾರ ಸಂಜೆ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ ಪಶುಪಾಲನಾ ಇಲಾಖೆ, ಅರಣ್ಯ, ಗ್ರಾಮೀಣಾಭಿವೃದ್ದಿ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆಗಳು ಸಮನ್ವಯದೊಂದಿಗೆ ಕೆಎಫ್‍ಡಿ ನಿಯಂತ್ರಣದಲ್ಲಿ ಸಕ್ರಿಯವಾಗಿ ಕಾರ್ಯನಿರತರಾಗಬೇಕು. ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕೆಂದರು.
ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕು ವೈದ್ಯಾಧಿಕಾರಿ ಮಾತನಾಡಿ, ತಾಲೂಕು ಆಸ್ಪತ್ರೆಗಳಲ್ಲಿ ಕೆಎಫ್‍ಡಿಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಉನ್ನತ ರೆಫರಲ್ ಸೆಂಟರ್’ಗೆ ಸಾಗಿಸಲು ಉಚಿತ ಆಂಬುಲೆನ್ಸ್ ಸೌಲಭ್ಯ ಮತ್ತು ಔಷಧಿಗಳ ಲಭ್ಯತೆ ಇದೆ ಎಂದರು.
ಹೆಲ್ಪ್ ಲೈನ್‍ಗೆ ಕರೆ ಮಾಡಿ
ಬಾಧಿತ ಪ್ರದೇಶದಲ್ಲಿ ಜನರಿಗೆ ಜ್ವರ ಇತರೆ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವಾಗಿ ಆಸ್ಪತ್ರೆಗೆ ಹೋಗಬೇಕು. ಹಾಗೂ ಹೆಚ್ಚಿನ ಸಹಾಯ ಅಗತ್ಯವಿದ್ದಲ್ಲಿ ಡಿಎಚ್‍ಓ ಹೆಲ್ಪ್ ಲೈನ್ ಸಂಖ್ಯೆಗೆ 08182-222382 ಕರೆ ಮಾಡಿ ಆಂಬುಲೆನ್ಸ್, ಚಿಕಿತ್ಸೆ ಸೇರಿದಂತೆ ಅಗತ್ಯ ಸೇವೆ ಪಡೆಯಬಹುದು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ವಿಡಿಎಲ್ ಅಧಿಕಾರಿ ಡಾ.ಹರ್ಷವರ್ಧನ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ತಾಲ್ಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.