ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಕೆಎಫ್.ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ಸೋಂಕು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 25 ಪ್ರಕರಣಗಳು ಪಾಸಿಟಿವ್ ಬಂದಂತಾಗಿದೆ.
READ | ಶಿವಮೊಗ್ಗದಲ್ಲಿ ಕೆಎಫ್‍ಡಿ ಸಹಾಯವಾಣಿ ರಿಲೀಸ್, ಏನೇ ಸಮಸ್ಯೆ ಇದ್ರೂ ಇಲ್ಲಿಗೆ ಕರೆ ಮಾಡಿ
ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ಆರೋಗ್ಯ ಇಲಾಖೆಯ ಅಧಿಕೃತ ಬುಲೆಟಿನ್ ಪ್ರಕಾರ, ಫೆ.9ರ ವರೆಗೆ ಶಿವಮೊಗ್ಗದಲ್ಲಿ 25, ಉತ್ತರ ಕನ್ನಡ 38 ಮತ್ತು ಚಿಕ್ಕಮಗಳೂರಿನಲ್ಲಿ 7 ಸೇರಿ ಒಟ್ಟು 70 ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ ಇಬ್ಬರ ಸಾವಾಗಿದೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
70ರಲ್ಲಿ 18 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 17 ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ರೇಟ್ 1.42 ಇದೆ. ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ವಿವಿಧ ಹಂತಗಳಲ್ಲಿ ಕಾರ್ಯಸನ್ನದ್ಧವಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದುವರೆಗೆ 3012 ಮಾದರಿಗಳನ್ನು ಪರೀಕ್ಷಿಸಲಾಗಿದೆ.