ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಗರ ಮೆಸ್ಕಾಂ ಜನ ಸಂಪರ್ಕ ಸಭೆ
SAGAR: ಸಾಗರ ಮೆಸ್ಕಾಂ ನಗರ ಉಪವಿಭಾಗ ಕಚೇರಿಯಲ್ಲಿ ಫೆ. 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448289516 ನ್ನು ಸಂಪರ್ಕಿಸುವುದು.
READ | ಎಸ್ಎಸ್ಎಲ್ಸಿ, ಪಿಯುಸಿ ವೇಳಾಪಟ್ಟಿ ದಿನಾಂಕ ನಿಗದಿ, ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ
THIRTHAHALLI: ತೀರ್ಥಹಳ್ಳಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಪ್ರಾರ್ಥಮಿಕ ಸಂಸ್ಕರಣೆ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 27 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ತಾಲೂಕು ಕುಶಾವತಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08181-228151 ನ್ನು ಸಂಪರ್ಕಿಸುವುದು.
ಲೆಕ್ಕಪರಿಶೋಧಕರ ಮಾಹಿತಿ ನೀಡಿ
SHIMOGA: ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳು 2023-24ನೇ ಸಾಲಿನ ಲೆಕ್ಕಪರಿಶೋಧನೆಯನ್ನು ಸೆ.1 ರೊಳಗೆ ಪೂರೈಸಿಕೊಳ್ಳುವಂತೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಸಹಕಾರ ಸಂಘಗಳು ಇಲಾಖೆಯ http://www.sahakaradarpana.kar.nic.in ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಅರ್ಹ ಲೆಕ್ಕಪರಿಶೋಧಕರ ಪೈಕಿ ಒಬ್ಬರನ್ನು ಸಂಘದ 2022-23ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆ ಮಾಡಿಕೊಂಡು ಮಾಹಿತಿಯನ್ನು ನೀಡದಿರುವವರು ಕೂಡಲೇ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಜಗನ್ನಾಥ ನರ್ಸಿಂಗ್ ಹೋಂ ಪಕ್ಕ, ಪಿ.ಜಿ.ಎಸ್. ಟವರ್, 2ನೇ ಮಹಡಿ, ಶಿವಮೊಗ್ಗ ಕಚೇರಿಗೆ ಸಲ್ಲಿಸುವಂತೆ ಹಾಗೂ ಸಕಾಲದಲ್ಲಿ ಲೆಕ್ಕಪರಿಶೋಧನೆ ನಿರ್ವಹಿಸಿಕೊಂಡು, ವರದಿಯ ಪ್ರತಿಯನ್ನು ಕಡ್ಡಾಯವಾಗಿ ಸೆಪ್ಟೆಂಬರ್ 1 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.
ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
SHIMOGA: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಎಲ್ಲಿ ಯಾವತ್ತು?
ಫೆ.26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ.
ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ.
ಫೆ. 28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ.
ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯಿತ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.