Power cut | ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?

POWER CUT 1

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ ವಿವಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ.28 ರಂದು ಬೆಳಗ್ಗೆ 9.30 ರಿಂದ ಸಂಜೆ 3.30ರವರೆಗೆ ಮಾಚೇನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್‍ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ, ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

READ | ಪೋಷಕರೇ ನೆನಪಿಟ್ಟುಕೊಳ್ಳಿ, ಶಿವಮೊಗ್ಗದಲ್ಲಿ ನೀಡಲಾಗುತ್ತಿದೆ ಪಲ್ಸ್ ಪೋಲಿಯೊ, ತಪ್ಪದೇ ಹಾಜರಾಗಿ

ವಿವಿಧೆಡೆ ಪವರ್ ಕಟ್

SHIMOGA: ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 28 ರಂದು ಬೆಳಗ್ಗೆ 9 ರಿಂದ ಸಂ. 6ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ಬಿ.ಎಚ್.ರಸ್ತೆ, ನಾಗಪ್ಪಕೇರಿ, ತಿರುಪಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!