ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಶೋಕ ನಗರದಲ್ಲಿ ಶಿಕ್ಷಕ ಕೊಟ್ರಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
ಕಳ್ಳರು ಮನೆಯ ಬಾಗಿಲು ತೆರೆದು ಒಳಗೆ ಪ್ರವೇಶಿಸಿದ್ದು, ಜರ್ಕಿನ್, ವಾಚ್, ನಗದು, ಎನ್ ಫೀಲ್ಡ್ ಬೈಕ್ ಕಳ್ಳತನ ಮಾಡಿದ್ದಾರೆ.
ಮನೆಯವರೆಲ್ಲಊಡ ಸೇವಿಸಿ ರಾತ್ರಿ ಮಲಗಿದ್ದು, ಸಮಯ ಸಾಧಿಸಿ ಒಳಗೆ ಬಂದ ಕಳ್ಳರು ಕೊಟ್ರಪ್ಪ ಅವರ ಕೊಠಡಿಯ ಬೀರುವಿನಿಂದ ₹43,800 ನಗದು, ಮಗನ ಬೆಡ್ ರೂಂನ ಬೀರುವಿನಿಂದ 4 ವಾಚ್, 2 ಜರ್ಕಿನ್, ಶೋಕೇಸ್‌ನಲ್ಲಿದ್ದ 3 ವಾಚ್, ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
READ | ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣ, ಇದುವರೆಗೆ ಎಷ್ಟು ಜನರಿಗೆ ಸೋಂಕು ತಗುಲಿದೆ?
ಬೆಳಗೆದ್ದು ನೋಡಿದಾಗ ಶಾಕ್
ಪಕ್ಕದ ಮನೆಯಲ್ಲಿರುವ ಸಹೋದರ ಬೆಳಗ್ಗೆ ರೈಲಿಗೆ ತೆರಳಲು ಮನೆಯಿಂದ ಹೊರ ಬಂದಾಗ ಕೊಟ್ರಪ್ಪರ ಮನೆಯ ಗೇಟ್ ತೆಗೆದಿತ್ತು. ಬೈಕ್ ನಾಪತ್ತೆಯಾಗಿತ್ತು. ಕೂಡಲೇ ಕೊಟ್ರಪ್ಪ ಅವರಿಗೆ ಕರೆ ಮಾಡಿದ್ದು, ಕಳವಾಗಿರುವ ವಿಚಾರ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.