ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮನೆಯಲ್ಲಿ ಕಳ್ಳತನ (theft in home) ಮಾಡಿರುವ ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಪೊಲೀಸರು (tunga nagar police) ಆರೋಪಿಯನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು (chikkamagaluru) ಜಿಲ್ಲೆ ಕಡೂರು (Kadur) ತಾಲ್ಲೂಕಿನ ಚಿಕ್ಕಪಟ್ಟಣಗೆರೆ ಗ್ರಾಮದ ಶಶಿನಾಯ್ಕ(27) ಎಂಬಾತನನ್ನು ಬಂಧಿಸಿ, ಅಂದಾಜು ₹15,73,000 ಮೌಲ್ಯದ ಒಟ್ಟು 286 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ₹6020 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
READ | ಬೈಕ್ ವ್ಹೀಲಿಂಗ್ ಮಾಡಿದವನಿಗೆ ಬಿತ್ತು ₹10 ಸಾವಿರ ದಂಡ
ಫೆ.8ರಂದು ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಲವಗೊಪ್ಪ ಗ್ರಾಮದ ನಿವಾಸಿ ನವೀನ್ ಕುಮಾರ್ ನಾಯ್ಕ್ ಅವರ ಮನೆಯ ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ
ಪ್ರಕರಣದ ಆರೋಪಿತರು ಮತ್ತು ಕಳವಾದ ಪ್ರಕರಣದ ಪತ್ತೆಗೆ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ಎ.ಜಿ.ಕಾರಿಯಪ್ಪ ಮಾರ್ಗದರ್ಶನದಲ್ಲಿ ಡಿವೈಎಸ್.ಪಿ ಬಾಬು ಆಂಜನಪ್ಪ ಮೇಲ್ವಿಚಾರಣೆಯಲ್ಲಿ ತುಂಗಾನಗರ ಪೊಲೀಸ್ ಠಾಣೆ ಪಿಐ ಬಿ.ಮಂಜುನಾಥ್ ನೇತೃತ್ವದಲ್ಲಿ ಪಿಎಸ್ಐ ವಿ.ಶಿವಪ್ರಸಾದ್, ಮಂಜುನಾಥ್, ಎಂ.ರಘುವೀರ್, ಕುಮಾರ ಕೂರಗುಂದ, ದೂದ್ಯಾನಾಯ್ಕ, ಎ.ಎಸ್.ಐ ಮನೋಹರ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಹರೀಶ್ ಅವರಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.