ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ನೀರು ಬಿಡುಗಡೆ ಮಾಡಲಾಗುತ್ತಿದೆ. ಫೆ.5ರ ರಾತ್ರಿ 10 ರಿಂದ ಫೆ. 10 ರ ರಾತ್ರಿ 10 ಗಂಟೆಯವರೆಗೆ ಪ್ರತಿ ದಿನ 2000 ಕ್ಯೂಸೆಕ್ಸ್‍ನಂತೆ ಒಟ್ಟು 12000 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು.
READ | ಶಿವಮೊಗ್ಗದಲ್ಲಿ ಒಂದೇ ದಿನ 11 ಜನರಿಗೆ ಮಂಗನ ಕಾಯಿಲೆ, ಜನರಲ್ಲಿ ಭೀತಿ, ಎಲ್ಲೆಲ್ಲಿ ಎಷ್ಟು ಪಾಸಿಟಿವ್?
ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಮತ್ತು ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.
ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.