Police Raid | ಶಿವಮೊಗ್ಗದಲ್ಲಿ 7.72 ಕೋಟಿ ರೂ. ಮೌಲ್ಯದ ದಿನಸಿ ಸಾಮಗ್ರಿ ಸೀಜ್!

Raid

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಸುಮಾರು 7.72 ಕೋಟಿ ರೂ. ಮೌಲ್ಯದ ದಿನಸಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಮೇಲ್ಸೇತುವೆ ಬಳಿಯ ರೈಸ್ ಮಿಲ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ 4.62 ಕೋಟಿ ರೂ.ಮೌಲ್ಯದ ದಿನಸಿ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

READ  | ಶಿವಮೊಗ್ಗ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ, ಕಾರಣ ನಿಗೂಢ

ವಿನೋಬನಗರ ಎಪಿಎಂಸಿ ಉಗ್ರಾಣವೊಂದರಲ್ಲಿ ಅಕ್ರಮವಾಗಿ 2.80 ಕೋಟಿ ರೂ. ಮೌಲ್ಯದ 22,900 ಚೀಲ ಅಕ್ಕಿಯನ್ನು ಸಂಗ್ರಹಿಸಿಡಲಾಗಿತ್ತು. ಭಾನುವಾರ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರೈಸ್ ಮಿಲ್ ಗಳಿಗೆ ಸೂಕ್ತ ದಾಖಲೆಗಳು ಇರಲಿಲ್ಲ. ಹೀಗಾಗಿ, ಪ್ರಕರಣವನ್ನು ವಾಣಿಜ್ಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ.
ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಗೇನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಭಾನುವಾರ ಸಂಜೆ 6.50 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

error: Content is protected !!